ಪ್ರಜ್ವಲ್ ರೇವಣ್ಣಗೆ ಇಂದು ಪುರುಷತ್ವ ಪರೀಕ್ಷೆ

ಪ್ರಜ್ವಲ್ ರೇವಣ್ಣಗೆ ಇಂದು ಪುರುಷತ್ವ ಪರೀಕ್ಷೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ಇದೀಗ ಭಾರತಕ್ಕೆ ಆಗಮಿಸಿದ್ದು, ನಿನ್ನೆ ರಾತ್ರಿ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಂದರ್ಭದಲ್ಲಿ SIT ಅಧಿಕಾರಿಗಳು ಲಾಕ್ ಮಾಡಿದ್ದಾರೆ.

ಹೌದು, ನೂರಾರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ವ್ಯಸಗಿದ ಆರೋಪವನ್ನು ಹೊತ್ತಿರುವ ಪ್ರಜ್ವಲ್ ರೇವಣ್ಣ ಅವರನ್ನು ಈಗ SIT ಅಧಿಕಾರಿಗಳು ಬಂದಿಸಿದ್ದು, ಇಂದು ಬೆಂಗಳೂರು ನಗರದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಲೈಂಗಿಕ ದೌರ್ಜನ್ಯ ಕೆಸ್ ಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರಿಗೆ ಪುರುಷತ್ವ ವನ್ನು ಪರೀಕ್ಷೆ ಮಾಡಲು ಮುಂದಾಗಿದ್ದಾರೆ.

ಯೆಸ್…ಪ್ರಜ್ವಲ್ ಅವರನ್ನುಇಂದು (ಶುಕ್ರವಾರ ಮೇ 31) ರಂದು ಬೆಳಗ್ಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಇಂದು ಶುಕ್ರವಾರ ಬೆಳಗ್ಗೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಅತ್ಯಾಚಾರ ಘಟನೆಗಳು ನಡೆದಿವೆ ಎಂದು ಹೇಳಲಾದ ಪ್ರಜ್ವಲ್ ರೇವಣ್ಣ ಅವರ ವಸತಿ ಗೃಹ ಮತ್ತು ಹೊಳೆನರಸೀಪುರದ ಫಾರ್ಮ್‌ ಹೌಸ್‌ಗಳಿಗೆ ಸ್ಥಳ ಮಹಜರಿಗಾಗಿ ಅವರನ್ನು ಕರೆದೊಯ್ಯಬೇಕಾಗಿರುವುದರಿಂದ ಎಸ್‌ಐಟಿ ಅವರನ್ನು ಕಸ್ಟಡಿಗೆ ಕೇಳಲಿದೆ. ಬಳಿಕ ಎಸ್‌ಐಟಿ ಅಧಿಕಾರಿಗಳು ವಿವರವಾದ ಹೇಳಿಕೆಗಳನ್ನು ದಾಖಲಿಸಿಕೊಳ್ಳಬೇಕಿದೆ.

ಇನ್ನು ಎಸ್‌ಐಟಿ ಕಚೇರಿಯ ಹೊರಗೆ ಮತ್ತು ಬೌರಿಂಗ್ ಆಸ್ಪತ್ರೆಯಲ್ಲೂ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

Related