ರಾಷ್ಟ್ರೀಯ ಡೆಂಗೀ ದಿನಾಚರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಡೆಂಗೀ ದಿನಾಚರಣೆ”ಯ ಕಾರ್ಯಕ್ರಮಕ್ಕೆ  ಕಾರ್ಯಕ್ರಮವನ್ನು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯ ಆಯುಕ್ತರು ಡಿ.ರಂದೀಪ್, ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಡಾ. ತ್ರಿಲೋಕ್ ಚಂದ್ರ ರವರು ಚಾಲನೆ ನೀಡಿದರು.

ಇದೇ ವೇಳೆ ಸೊಳ್ಳೆ ನಿಯಂತ್ರಣ ಕಾರ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಇಬ್ಬರು ಆರೋಗ್ಯ ಕಾರ್ಯಕರ್ತರು ಹಾಗೂ 5 ಖಾಸಗಿ ಸಂಸ್ಥೆ/ಆಸ್ಪತ್ರೆ/ಪ್ರಯೋಗಾಲಯಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

“ರಾಷ್ಟ್ರೀಯ ಡೆಂಗೀ ದಿನಾಚರಣೆ”ಯ ಅಂಗವಾಗಿ ಬೆಂಗಳೂರು ನಗರ ಪ್ರದೇಶ ಜನರಿಗೆ ಡೆಂಗಿ ಸಾಂಕ್ರಾಮಿಕ ರೋಗದ ಹರಡುವಿಕೆ ಹಾಗೂ ನಿಯಂತ್ರಣ ಬಗ್ಗೆ ಅರಿವು ಮೂಡಿಸಲು ಎಂ.ಜಿ.ರಸ್ತೆಯ ಗಾಂಧಿ ಉದ್ಯಾನವನದಿಂದ ಹಿಡಿದು ಪಾಲಿಕೆಯ ಕೇಂದ್ರ ಕಛೇರಿ ಆವರಣದವರೆಗೆ ಪಾಲಿಕೆ ವತಿಯಿಂದ “ಬೃಹತ್ ಜನಜಾಗೃತಿ ಜಾಥಾ” ನಡೆಯಿತು. ಈ ಜಾಥಾದಲ್ಲಿ ಪಾಲಿಕೆಯ ಅಧಿಕಾರಿಗಳು, ವೈದ್ಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ಸ್ಥಳೀಯ ಸ್ವಯಂ ಸೇವಾ ಸಂಸ್ಥೆ ಪದಾಧಿಕಾರಿಗಳು ಸೇರಿದಂತೆ 800ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

Related