ತಿರುಚುವುದು ಕಾಂಗ್ರೆಸ್ ಪಕ್ಷದ ಪರಂಪರಾಗತ ಚಾಳಿ: ಜೆಡಿಎಸ್

ತಿರುಚುವುದು ಕಾಂಗ್ರೆಸ್ ಪಕ್ಷದ ಪರಂಪರಾಗತ ಚಾಳಿ: ಜೆಡಿಎಸ್

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಆಡಳಿತ ಪಕ್ಷದ ಮೇಲೆ ವಿರೋಧ ಪಕ್ಷದ ನಾಯಕರುಗಳು ಒಂದಲ್ಲ ಒಂದು ರೀತಿ ಆರೋಪ ಮಾಡುತ್ತಿದ್ದು ಜೆಡಿಎಸ್ ಪಕ್ಷವು ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ಹೊರ ಹಾಕಿದೆ.

ಜೆಡಿಎಸ್ ಪಕ್ಷವು ತನ್ನ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಗ್ಯಾರಂಟಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗಿ ಮೈ ಪರಚಿಕೊಳ್ಳುತ್ತಿದೆ ಎಂದು ಪೋಸ್ಟ್ ಮಾಡಿದೆ. ತಿರುಚುವುದು ಕಾಂಗ್ರೆಸ್ ಪಕ್ಷದ ಪುರಾತನ-ಪರಂಪರಾಗತ ಚಾಳಿ. ʼಫೇಕ್ ಫ್ಯಾಕ್ಟರಿʼ ಆಗಿರುವ ಕಾಂಗ್ರೆಸ್ ಹೆಚ್’ಡಿ.ಕುಮಾರಸ್ವಾಮಿಯವರ ಹೇಳಿಕೆ ತಿರುಚಿ ಮೈ ಪರಚಿಕೊಳ್ಳುತ್ತಿದೆ.

75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ. ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ ರಕ್ಕಸಭೋಜನ ಮುಂದುವರಿದೆ ಎಂದು ಕಿಡಿಕಾರಿದೆ.

Related