ದೇಶದಲ್ಲೇ ಮೊದಲನೇ ಬಾರಿ ‘ಮಾಸ್ಕ್ ಡೇ’ ಆಚರಣೆ

ದೇಶದಲ್ಲೇ ಮೊದಲನೇ ಬಾರಿ ‘ಮಾಸ್ಕ್ ಡೇ’ ಆಚರಣೆ

ಬೆಂಗಳೂರು : ಸೋಂಕು ತಡೆಯಲು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ.. ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬದಂತೆ ನಿಯಂತ್ರಿಸಲು ಸರ್ಕಾರದ ಜತೆ ಸಾರ್ವಜನಿಕರು ಕೈ ಜೋಡಿಸಬೇಕೆಂದು ಬಿ.ಎಸ್.ಯಡಿಯೂರಪ್ಪ ನವರು ಮನವಿ ಮಾಡಿದ್ದಾರೆ.

ಬಿಬಿಎಂಪಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೋವಿಡ್-19 ಸೋಂಕು ಹರಡುವಿಕೆ ತಡೆಯಲು ಹಮ್ಮಿಕೊಂಡಿದ್ದ ಮಾಸ್ಕ್ ದಿನಾಚರಣೆ ಜನಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.

ರಾಜ್ಯಸರ್ಕಾರ ಕೊರೊನಾ ನಿಯಂತ್ರಿಸಲು ಸಾಕಷ್ಟು ತ್ವರಿತವಾದ ಕ್ರಮಗಳನ್ನು ಕೈಗೊಂಡಿದೆ. ಕೇವಲ ಸರ್ಕಾರದಿಂದ ಮಾತ್ರ ಇದು ಸಾಧ್ಯವಿಲ್ಲ. ನಮ್ಮ ಜತೆ ಸಾರ್ವಜನಿಕರು ಕೈ ಜೋಡಿಸಿದರೆ ಇದನ್ನು ತಹಬದಿಗೆ ತರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೆಂಟಿಲೇಟರ್ ಬಳಕೆ, ಎನ್95 ಮಾಸ್ಕ್, ಸಾಮಾಜಿಕ ಅಂತರ, ಸಂಚಾರಿ ಫೀವರ್ ಕ್ಲಿನಿಕ್ ಆರಂಭ, ಪ್ರತಿಯೊಬ್ಬರೂ ಮಾಸ್ಕ್ ಧರಿಸುತ್ತಿರುವುದು ಸೇರಿದಂತೆ ಹಲವು ಕ್ರಮಗಳ ಬಗ್ಗೆ ಪ್ರಶಂಸಿಸಿದ್ದಾರೆ ಎಂದರು.

ವಿಶ್ವ ಆರೋಗ್ಯ ಸಂಸ್ಥೆ ಕೂಡ ಮಾಸ್ಕ್ ಧರಿಸುವುದರಿಂದ ಕೊರೋನಾ ಸೋಂಕು ಹಬ್ಬುವುದನ್ನು ತಡೆಗಟ್ಟಬಹುದು ಎಂದು ಹೇಳಿದೆ. ಹೀಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಜತೆಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ನಿಮ್ಮ ನೆರೆಹೊರೆಯವರಿಗೂ ಇದರ ಬಗ್ಗೆ ಮನವರಿಕೆ ಮಾಡಿ ಎಂದು ಸಿಎಂ ಮನವಿ ಮಾಡಿದರು.

ಕೊರೊನಾ ನಿಯಂತ್ರಿಸಲು ವೈದ್ಯರು, ನರ್ಸ್, ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವಾರು ಸಿಬ್ಬಂದಿಗಳು ಹಗಲು-ರಾತ್ರಿ ಎನ್ನದೆ ಕೆಲಸ ಮಾಡಿದ್ದಾರೆ. ಅವರ ಸೇವೆಗೆ ನಾನು ಚಿರಋಣಿಯಾಗಿದ್ದೇನೆ. ಇದಕ್ಕಾಗಿ ನಮ್ಮ ಸರ್ಕಾರ ವಿಶೇಷವಾಗಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ 10 ಲಕ್ಷ ಮಾಸ್ಕ್ ವಿತರಣೆ ಮಾಡಿದ ಆರ್ಕೆ ಟ್ರಸ್ಟ್ಗೆ ಸಿಎಂ ಅಭಿನಂದನೆ ಸಲ್ಲಿಸಿದರು. ಇದಕ್ಕೂ ಮುನ್ನ ಬೆಳಗ್ಗೆ ವಿಧಾನಸೌಧದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಕಬ್ಬನ್ಪಾರ್ಕ್ವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಯಿತು.

.

Related