ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಐಟಿ ದಾಳಿ

ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಐಟಿ ದಾಳಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭರ್ಜರಿಯಾಗಿ ಐಟಿ ದಾಳಿ ನಡೆಸಿದ ಐಟಿ ಅಧಿಕಾರಿಗಳು. ಬರೋಬ್ಬರಿ 42 ರಿಂದ 45 ಕೋಟಿ ರೂಗಳನ್ನು ವಶಪಡಿಸಿಕೊಂಡಿದ್ದಾರೆ.

ಮಾಜಿ‌ ಕಾರ್ಪೊರೇಟರ್ ಹಾಗೂ ಗುತ್ತಿಗೆದಾರ ದಂಪತಿಯ ಸಂಬಂಧಿಕನ ಮನೆಯಲ್ಲಿ ಬರೋಬ್ಬರಿ 42 ರಿಂದ 45 ಕೋಟಿ ರೂಪಾಯಿ ಕಂತೆ ನೋಟುಗಳು ಪತ್ತೆಯಾಗಿವೆ.

ಪೊಲೀಸ್ ಭದ್ರತೆಯೊಂದಿಗೆ ಆರ್ ಟಿ ನಗರದ 2 ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಕಂತೆ ಕಂತೆ ನೋಟುಗಳ ರಾಶಿಯೇ ಪತ್ತೆಯಾಗಿದೆ. ಮಂಚದ ಅಡಿಯಲ್ಲಿ, ಬಾಕ್ಸ್ ಗಳಲ್ಲಿ ತುಂಬಿಸಿಟ್ಟಿದ್ದ ಈ ಹಣದ ಮೂಲ ಯಾವುದು, ಯಾರಿಗೆ ಸೇರಿದ್ದು ಎಂಬುದಾಗಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸುಲ್ತಾನ್ ಪಾಳ್ಯದ ಆತ್ಮಾನಂದ ಕಾಲೊನಿಯ ಫ್ಲಾಟ್ ಒಂದರಲ್ಲಿ ಈ ಕೋಟಿ ಕೋಟಿ ಹಣ ಪತ್ತೆಯಾಗಿದೆ.

ಬಳಿಕ ವಾರ್ಡ್ 95 ರ ಮಾಜಿ ಕಾಂಗ್ರೆಸ್ ಕಾರ್ಪೊರೇಟರ್ ಅಶ್ವಥಮ್ಮ ಹಾಗೂ ಗುತ್ತಿಗೆದಾರ ಆರ್ ಅಂಬಿಕಾಪತಿ ದಂಪತಿ ನಿವಾಸದ ಮೇಲೂ ಐಟಿ ರೈಡ್ ಆಗಿದೆ. ಇವರು ಮಾಜಿ ಶಾಸಕರ ಸಂಬಂಧಿಕರು ಎನ್ನಲಾಗಿದ್ದು, ಅವ್ಯವಹಾರ ನಡೆಸಿದ್ದಾರೆಂಬ ಆರೋಪದ ಮೇಲೆ ದಾಳಿ ನಡೆಸಲಾಗಿದೆ.

ಗುರುವಾರ ಸಂಜೆಯಿಂದಲೇ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಕಂತೆ ಕಂತೆ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಮಂಚದ ಅಡಿಯಲ್ಲಿ ಬರೋಬ್ಬರಿ 23 ಬಾಕ್ಸ್ ಗಳಲ್ಲಿ 500 ಮುಖಬೆಲೆಯ ಕಂತೆ ನೋಟುಗಳು ಪತ್ತೆಯಾಗಿವೆ. ಕಾರಿನಲ್ಲಿ ಹಣ ಸಾಗಾಟ ಮಾಡಲು ತಯಾರಾಗಿತ್ತು ಎಂದು ನಿನ್ನೆ ಸಂಜೆ 6 ಗಂಟೆಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಆರ್ ಟಿ ನಗರದ ಎರಡು ಸ್ಥಳಗಳ ಮೇಲೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

 

Related