ಮುಂಬೈ ಮೇಯರ್ ಗೆ ಕೊರೋನಾ ಸೋಂಕು !

ಮುಂಬೈ ಮೇಯರ್ ಗೆ ಕೊರೋನಾ ಸೋಂಕು !

ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಯಾಗಿ ಕೆಲಸ ಮಾಡುವ ಮೂಲಕ ಕೊರೋನಾ ವಾರಿಯರ್ಸ್ ಗೆ ನೈತಿಕ ಬೆಂಬಲ ಸೂಚಿಸಿದ್ದ ಮೇಯರ್ ಕಿಶೋರಿ ಪಡ್ನೇಕರ್ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದೆ.

ಈ ಬಗ್ಗೆ ಸ್ವತಃ ಅವರೇ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ರ‍್ಯಾಪಿಡ್ ಆ್ಯಂಟಿ ಜೆನ್ ಟೆಸ್ಟ್ ವೇಳೆ ತಮಗೆ ಕೊರೋನಾ ಸೋಂಕು ದೃಢಪಟ್ಟಿದೆ. ಆದರೆ ನನ್ನಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ, ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

Related