ನುಗ್ಗಿ ಸೊಪ್ಪಿನಲ್ಲಿದೆ ಔಷಧೀಯ ಗುಣಗಳು!

ನುಗ್ಗಿ ಸೊಪ್ಪಿನಲ್ಲಿದೆ ಔಷಧೀಯ ಗುಣಗಳು!

ಸಾಮಾನ್ಯವಾಗಿ ನುಗ್ಗೆಕಾಯಿ ಸೇವನೆಯಿಂದ ನಮ್ಮ ಆರೋಗ್ಯದಲ್ಲಿ ಹಲವಾರು ರೀತಿಯ ಪ್ರಯೋಜನ ಪ್ರಯೋಜನಗಳಿವೆ ಎಂದು ವೈದ್ಯರು ತಿಳಿಸುತ್ತಾರೆ.

ಹೌದು, ಕೇವಲ ನುಗ್ಗೆಕಾಯಿ ಮಾತ್ರ ಅಲ್ಲದೆ ನುಗ್ಗೆಕಾಯಿ ಸೊಪ್ಪು ಮತ್ತು ನುಗ್ಗೆಕಾಯಿ ಹೂವು ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಹಲವಾರು ರೀತಿಯ ಔಷಧೀಯ ಗುಣಗಳು ದೊರೆಯುತ್ತವೆ ಎಂದು ವೈದ್ಯರು ತಿಳಿಸುತ್ತಾರೆ

ನುಗ್ಗೆಕಾಯಿಯಂತೆ ನುಗ್ಗೆ ಸೊಪ್ಪಿನಲ್ಲಿಯೂ ಹಲವಾರು ಆಂಟಿ ಆಕ್ಸಿಡೆಂಟುಗಳೂ ಮತ್ತು ಇತರ ಅಗತ್ಯ ಪೋಷಕಾಂಶಗಳೂ ಲಭ್ಯವಿದ್ದು ಮುಖ್ಯವಾಗಿ ರಕ್ತದಲ್ಲಿ ಕೊಲೆಸ್ಟ್ರಾಲ್ ಮಟ್ಟ ಕಡಿಮೆಗೊಳಿಸುವಲ್ಲಿ ಹಾಗೂ ಅಧಿಕ ರಕ್ತದ ಒತ್ತಡವನ್ನು ಕಡಿಮೆಗೊಳಿಸುವಲ್ಲಿ ನೆರವಾಗುತ್ತದೆ.

ಇವು ಮಧುಮೇಹಿಗಳ ರಕ್ತದಲ್ಲಿ ಅಧಿಕ ಪ್ರಮಾಣದಲ್ಲಿರುವ ಸಕ್ಕರೆಗೆ ವಿರುದ್ಧವಾಗಿ ಕೆಲಸ ಮಾಡುತ್ತವೆ. ಪರಿಣಾಮವಾಗಿ ರಕ್ತ ಸಕ್ಕರೆಯನ್ನು ಸಹಿಸಿಕೊಳ್ಳುವ ಶಕ್ತಿ ಹೆಚ್ಚಿಸುತ್ತದೆ ಹಾಗೂ ರಕ್ತದಲ್ಲಿ ಥಟ್ಟನೇ ಅಧಿಕ ಪ್ರಮಾಣದ ರಕ್ತ ನುಗ್ಗದಿರುವಂತೆ ನೋಡಿಕೊಳ್ಳುತ್ತದೆ.

ಅಲ್ಲದೇ ನೈಟ್ರಿಕ್ ಆಮ್ಲದ ಪ್ರಮಾಣದಲ್ಲಿ ಗಣನೀಯವಾದ ಇಳಿಕೆ ಮತ್ತು ರಕ್ತದ ನೀರಿನಲ್ಲಿ ಗ್ಲೂಕೋಸ್ ಮಟ್ಟ ಕಡಿಮೆಗೊಳಿಸಿ ಇನ್ಸುಲಿನ್ ಮತ್ತು ಪ್ರೋಟೀನುಗಳನ್ನು ಹೆಚ್ಚಿಸುತ್ತದೆ. ಇದರಿಂದ ರಕ್ತದಲ್ಲಿ ಗ್ಲೂಕೋಸ್ ಮಟ್ಟ ಆರೋಗ್ಯಕರವಾಗಿರಲು ನೆರವಾಗುತ್ತದೆ.

ನುಗ್ಗೆಸೊಪ್ಪಿನಲ್ಲಿರುವ ಪೋಷಕಾಂಶಗಳು ಈ ಸಂಗ್ರಹವನ್ನು ಸಡಿಲಗೊಳಿಸಿ ಪ್ರತಿ ಕಣಗಳು ಬಿಡಿಬಿಡಿಯಾಗುವಂತೆ ಮಾಡುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ನ ಪ್ರಮಾಣ ಕಡಿಮೆ ಮಾಡುತ್ತವೆ. ಇದರಿಂದ ರಕ್ತದಲ್ಲಿ ಒಟ್ಟು ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಮಟ್ಟ ಕಡಿಮೆಯಾಗುತ್ತದೆ ಮತ್ತು ಕರುಳಿನ ಮೂಲಕ ಇನ್ನಷ್ಟು ಕೊಲೆಸ್ಟ್ರಾಲ್ ಹೀರುವುದನ್ನೂ ತಡೆಯುತ್ತದೆ.

ಆಂಟಿ ಆಕ್ಸಿಡೆಂಟುಗಳು ಕೊಬ್ಬು ರಕ್ತನಾಳಗಳ ಒಳಗೆ ಸಂಗ್ರಹವಾಗುವ ಅಧಿಕ ರಕ್ತದೊತ್ತಡ ಮತ್ತು ಇತರ ಸಂಬಂಧಿತ ಕಾಯಿಲೆಗಳಿಂದ ರಕ್ಷಣೆ ನೀಡುತ್ತದೆ.

 

Related