ಗದಗ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಗೆದ್ದು ಬಂದ ಮೇಲೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕ್ಷೇತ್ರ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದ್ದು ಅದರಂತೆ ಗದಗ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಾವೇರಿ – ಗದಗ ಲೋಕಸಭಾ ಕ್ಷೇತ್ರಗಳಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ಪ್ರಗತಿ ಹಾಗೂ ಅಭಿವೃದ್ದಿ ಕುರಿತಾದ ಸಭೆಯನ್ನು ಇಂದು (ಮಂಗಳವಾರ ಸೆ. 03) ರಂದು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಗದಗ – ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ನಡೆಸಿದರು. ಇದನ್ನೂ ಓದಿ: ನ್ಯಾಯಾಲಯದ ತೀರ್ಮಾನವಾದಂತೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ: ಸಿಎಂ
ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಗಳಾದ ಭರತ, ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.