ಸೆ.13ರಿಂದ ವಿಧಾನಮಂಡಲದ ಅಧಿವೇಶನ

ಸೆ.13ರಿಂದ ವಿಧಾನಮಂಡಲದ ಅಧಿವೇಶನ

ಬೆಂಗಳೂರು : ಕೋವಿಡ್ ಕಾರಣದಿಂದಾಗಿ ವಿಳಂಬವಾಗಿದ್ದಂತ ರಾಜ್ಯ ವಿಧಾನಮಂಡಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟದಲ್ಲಿ ಸೆ.13 ರಿಂದ ಹತ್ತು ದಿನಗಳ ಕಾಲ ವಿಧಾನ ಮಂಡಲ ಅಧಿವೇಶನವನ್ನು ನಡೆಸೋದಕ್ಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ವಿಧಾನ ಮಂಡಲದ ಅಧಿವೇಶನ ಕರೆಯೋದು ತಡವಾಗಿದ್ದು, ವಿಪಕ್ಷಗಳು ಅಧಿವೇಶನ ಕರೆಯೋದಕ್ಕೂ ಆಗ್ರಹಿಸಿದ್ದರು. ಸಚಿವ ಸಂಪುಟ ಸಭೆಯಲ್ಲಿ, ವಿಧಾನ ಮಂಡಲದ ಅಧಿವೇಶನ ನಡೆಸಲು ನಿರ್ಧರಿಸಿದೆ. ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

Related