ಮೆಟ್ರೋ ಪ್ರಯಾಣಿಕರಿ ಗಮನಿಸಿ; 3 ದಿನಗಳ ಕಾಲ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ!

ಮೆಟ್ರೋ ಪ್ರಯಾಣಿಕರಿ ಗಮನಿಸಿ; 3 ದಿನಗಳ ಕಾಲ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜನವರಿ 26ರಿಂದ ಮೂರು ದಿನಗಳ ಕಾಲ ಮೆಟ್ರೋ ಸಂಚಾರದಲ್ಲಿ ವ್ಯಥೆಯಾಗಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಹೌದು, ಪೀಣ್ಯದಿಂದ ನಾಗಸಂದ್ರದ ಮೆಟ್ರೋ ನಿಲ್ದಾಣಗಳ ನಡುವೆ ಜನವರಿ 26 ರಿಂದ ಮೂರು ದಿನಗಳ ಕಾಲ ಮೆಟ್ರೋಸ್ ಸ್ಥಗಿತವಾಗಲಿದೆ. ಹಸಿರು ಮಾರ್ಗದಲ್ಲಿ ಮೆಟ್ರೋ ಮಾರ್ಗ ವಿಸ್ತರಣೆಯ ಕಾಮಗಾರಿಯ ನಿಮಿತ ಈ ಮೂರು ದಿನಗಳ ಕಾಲ ಈ ಮಾರ್ಗಗಳಲ್ಲಿ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿದುಬಂದಿದೆ.

ಇನ್ನು ಸಾಲುಸಾಲಾಗಿ ಸರಕಾರಿ ರಜೆ ಇರುವುದರಿಂದ ಸಾರ್ವಜನಿಕರು ಪ್ರವಾಸ ಕೈಗೊಳ್ಳುತ್ತಾರೆ, ಆದರೆ ಈ ಸಂದರ್ಭದಲ್ಲಿ ಮೆಟ್ರೋ ಸ್ಥಗಿತವಾಗಿದ್ದ ಕಾರಣ ಸಾರ್ವಜನಿಕರಿಗೆ ಕೊಂಚ ತೊಂದ್ರೆ ಆಗಬಹುದು.

ಇತ್ತ ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನ ಲಾಲ್‌ಬಾಗ್‌ನಲ್ಲಿ ನಡೆಯುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಲಾಲ್‍ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಪರಿಚಯ ಮಾಡಿದೆ.

ಯಾವುದೇ ನಿಲ್ದಾಣದಿಂದ ಲಾಲ್‍ಬಾಗ್ ಮೆಟ್ರೋ ನಿಲ್ದಾಣಕ್ಕೆ ಟೋಕನ್, ಸ್ಮಾರ್ಟ್ ಕಾರ್ಡ್, NCMC ಕಾರ್ಡ್, ಕ್ಯೂಆರ್ ಟಿಕೆಟ್‍ಗಳ ಮೂಲಕ ಪ್ರಯಾಣಿಸಬಹುದು.

 

Related