ಸಿಲಿಕಾನ್ ಸಿಟಿಯಲ್ಲಿ ಮೆಟ್ರೋ ಕಾಮಗಾರಿ, ಹಲವೆಡೆ ಟ್ರಾಫಿಕ್ ಜಾಮ್

ಸಿಲಿಕಾನ್ ಸಿಟಿಯಲ್ಲಿ ಮೆಟ್ರೋ ಕಾಮಗಾರಿ, ಹಲವೆಡೆ ಟ್ರಾಫಿಕ್ ಜಾಮ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯನ್ನು ತಪ್ಪಿಸಲು ಮೆಟ್ರೋ ಸಂಚಾರವನ್ನು ಈಗಾಗಲೇ ಪ್ರಾರಂಭಿಸಿದ್ದು, ಇನ್ನು ಕೆಲವು ಏರಿಯಾಗಳಲ್ಲಿ ಮೆಟ್ರೋ ಸಂಚಾರ ಪ್ರಾರಂಭವಾಗಬೇಕಾಗಿದ್ದು ಇದಕ್ಕೆ ಮೆಟ್ರೋ ಕಾಮಗಾರಿ ಪ್ರಗತಿಯಲ್ಲಿದ್ದು ನಗರದಾದ್ಯಂತ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ.

ಹೌದು, ಮೆಟ್ರೋ ಕಾಮಗಾರಿ ಹಿನ್ನೆಲೆ ನಗರದ ಹಲವು ಭಾಗಗಳಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಉಂಟಾಗಿದೆ. ಈಗ ನೀಲಿ ಮಾರ್ಗದ ಪಿಲ್ಲರ್ ಕೆಲಸ ಶುರುವಾಗಿದ್ದು, ದೇವರಬೀಸನಹಳ್ಳಿ ಬಳಿ ನಿಧಾನಗತಿಯ ಸಂಚಾರ ಇರಲಿದೆ.

ದೇವರಬೀಸನಹಳ್ಳಿ ಮೇಲ್ಸೇತುವೆ ಬಳಿ ಮೆಟ್ರೊ ಪಿಲ್ಲರ್‌ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ಸೋಮವಾರದಿಂದ ಬೆಳಗ್ಗೆ ಮತ್ತು ಸಂಜೆಯ ದಟ್ಟಣೆಯ ವೇಳೆಯಲ್ಲಿ ನಿಧಾನಗತಿಯ ಸಂಚಾರಕ್ಕೆ ಎಚ್‌ಎಎಲ್‌ ವಿಮಾನ ನಿಲ್ದಾಣ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.

ಮೆಟ್ರೋ ಕಾಮಗಾರಿಯು ಸಿಲ್ಕ್ ಬೋರ್ಡ್ ಜಂಕ್ಷನ್ ಅನ್ನು ಕೆಆರ್ ಪುರ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಹೊರ ವರ್ತುಲ ರಸ್ತೆ ಅಥವಾ ನೀಲಿ ಮಾರ್ಗದ ಭಾಗವಾಗಿದೆ.

ಎಚ್‌ಎಎಲ್ ವಿಮಾನ ನಿಲ್ದಾಣ ಸಂಚಾರ ಪೊಲೀಸರು ಕಾಡುಬೀಸನಹಳ್ಳಿಯ ಸರ್ವೀಸ್ ಮತ್ತು ಮುಖ್ಯ ರಸ್ತೆಗಳಲ್ಲಿ ತಾತ್ಕಾಲಿಕ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಇಂದಿನಿಂದ ಒಂದು ವಾರಗಳವರೆಗೆ ನಿಧಾನಗತಿಯ ಸಂಚಾರ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

 

Related