ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ, ಶಾಸಕರ ಪಾತ್ರವಿಲ್ಲ: ಡಿಸಿಎಂ

ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ, ಶಾಸಕರ ಪಾತ್ರವಿಲ್ಲ: ಡಿಸಿಎಂ

ಬೆಂಗಳೂರು: ರಾಜ್ಯದಲ್ಲಿ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಸಚಿವ ಮತ್ತು ಶಾಸಕರ ಪಾತ್ರವಿಲ್ಲವೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಚುರುಕಿನ ತನಿಖೆ ಪ್ರಾರಂಭವಾಗಿದ್ದು ಈ ಪ್ರಕರಣದಲ್ಲಿ ಶಾಸಕರು ಮತ್ತು ಸಚಿವರ ಪಾತ್ರವಿಲ್ಲವೆಂದು ಹೇಳಿದ್ದಾರೆ. ಇದನ್ನೂ ಓದಿ:ಎಲ್ಲಂದರಲ್ಲಿ ಕಸ ಬಿಸಾಕುವವರ ಅವರ ವಿರುದ್ಧ ಕಠಿಣ ಕ್ರಮ: ಡಿಸಿಎಂ

ನಾನು ಆ ಆಡಿಯೋವನ್ನು ಕೇಳಿಲ್ಲ. ಜೊತೆಗೆ ಮುಕ್ತವಾಗಿ ತನಿಖೆ ನಡೆಯಬೇಕು ಎಂದು ಸಚಿವರೇ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ. ಸ್ವತಃ ಸಚಿವರೇ ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಹೇಳಿದ್ದಾರೆ. ಅವರಿಗೂ ನೋಟೀಸ್ ನೀಡಲಾಗಿದೆ ಎಂದು ಮಾಧ್ಯಮಗಳ ಮೂಲಕ ತಿಳಿಯಿತು. ನಾನು ಇದರಲ್ಲಿ ಮೂಗು ತೂರಿಸಲು ಹೋಗುವುದಿಲ್ಲ. ಭ್ರಷ್ಟಾಚಾರದಲ್ಲಿ ನಮ್ಮ ಮಂತ್ರಿ, ಶಾಸಕರ ಪಾತ್ರವಿಲ್ಲ, ಆದರೆ ಬೇರೆಯವರು ಇದರಲ್ಲಿ ಭಾಗಿಯಾಗಿದ್ದಾರೆ ಎಂದರು.

ಸೋರಿಕೆಯಾಗಿರುವ ಆಡಿಯೋ ಸಂಭಾಷಣೆಯಲ್ಲಿ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಅಧ್ಯಕ್ಷರಿಗೆ ತಿಳಿಸೋಣ ಎಂದು ಪರಶುರಾಮ್ ಹೇಳುತ್ತಾರೆ. ಹಗರಣದ ಬಗ್ಗೆ ಅಧ್ಯಕ್ಷರಿಗೆ ಮತ್ತು ಸಚಿವರಿಗೆ ಏನೂ ತಿಳಿದಿಲ್ಲ ಎಂಬುದು ಈ ಆಡಿಯೋ ಮೂಲಕವೇ ಸ್ಪಷ್ಟವಾಗುತ್ತಿಲ್ಲವೇ. ನಾನು ಆಡಿಯೋವನ್ನು ಕೇಳಿಸಿಕೊಂಡಿಲ್ಲ ನಿಮ್ಮಿಂದಲೇ ವಿಚಾರ ತಿಳಿಯುತ್ತಿದೆ. ನೀವು ಹೇಳುತ್ತಿರುವ ಮಾತಿನಲ್ಲೇ ಈ ಪ್ರಕರಣದಲ್ಲಿ ಅಧ್ಯಕ್ಷರು ಹಾಗೂ ಸಚಿವರ ಪಾತ್ರವಿಲ್ಲ ಎಂಬುದು ಸ್ಚಷ್ಟವಾಗಿದೆ ಎಂದರು.

 

Related