‘ಪಶು ಸಂಜೀವಿನಿ’ ವಾಹನಕ್ಕೆ ಚಾಲನೆ ನೀಡಿದ ಸಚಿವ

‘ಪಶು ಸಂಜೀವಿನಿ’ ವಾಹನಕ್ಕೆ ಚಾಲನೆ ನೀಡಿದ ಸಚಿವ

ಮೈಸೂರು : ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಇಂದು ಬೆಳಿಗ್ಗೆ ಜಿ.ಪಂ ಆವರಣದಲ್ಲಿ ಪಶು ಚಿಕಿತ್ಸಾ ‘ಪಶು ಸಂಜೀವಿನಿ’ ವಾಹನವನ್ನು ಹಸಿರು ನಿಶಾನೆ ತೋರಿಸುವ ಮೂಲಕ ಲೋಕಾರ್ಪಣೆ ಮಾಡಿದರು.

ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಪಶು ಸಂಜೀವಿನಿ ವಾಹನದಿಂದ ಜಾನುವಾರುಗಳ ಮಾಲೀಕರಿಗೆ ಅನುಕೂಲವಾಗಲಿದೆ.

ಜಾನುವಾರುಗಳಿಗೆ ತೊಂದರೆಯಾದಲ್ಲಿ 1962 ಸಹಾಯವಾಣಿಗೆ ಕರೆ ಮಾಡಿದಲ್ಲಿ ತಕ್ಷಣವೇ ವಾಹನವು ವೈದ್ಯರ ಜೊತೆಯಲ್ಲಿಯೇ ಮಾಲೀಕನ ಮನೆಗೆ ತೆರಳಿ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.

Related