ಸಿಎಂ, ಡಿಸಿಎಂ ಪದಗ್ರಹಣ

ಸಿಎಂ, ಡಿಸಿಎಂ ಪದಗ್ರಹಣ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿದ್ದು ಇಂದು ಸಿದ್ದರಾಮಯ್ಯ ಮತ್ತೆ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಮಾಡಿದರು.

ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಗಿದೆ. ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ನಾಯಕರು, ರಾಜ್ಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾದರು.

 

Related