ಶಾಲೆ ಆರಂಭದ ಪೂರ್ವಸಿದ್ಧತೆಯನ್ನು ಪರಿಶೀಲಿಸಿದ ಸಚಿವ ಎಸ್.ಟಿ.ಸೋಮಶೇಖರ್

  • In State
  • August 17, 2021
  • 354 Views
ಶಾಲೆ ಆರಂಭದ ಪೂರ್ವಸಿದ್ಧತೆಯನ್ನು ಪರಿಶೀಲಿಸಿದ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು : ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಕೋವಿಡ್ ಸಂಬಂಧಿಸಿದಂತ ವಿಷಯಗಳು, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲೆ ಹಾಗೂ ಕಾಲೇಜುಗಳ ಪ್ರಾರಂಭಕ್ಕೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಮಂಗಳವಾರದಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಸಮಿತಿಯ ಶಿಫಾರಸಿನಂತೆ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಮಕ್ಕಳ ಮೇಲೆ ಹೆಚ್ಚಿನ ನಿಗಾವಹಿಸಿ. ಪೋಷಕರಿಗೆ, ಮಕ್ಕಳಿಗೆ ಆತ್ಮ ಸ್ಥೈರ್ಯ ತುಂಬಬೇಕು. ಜಿಲ್ಲೆಯಲ್ಲಿ ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರೌಢಶಾಲೆಗಳಲ್ಲಿ ಒಟ್ಟು 9088 ಶಿಕ್ಷಕರು ಇದ್ದಾರೆ. ಇದರ ಪೈಕಿ 796 ಶಿಕ್ಷಕರು ಮಾತ್ರ ಇನ್ನೂ ಲಸಿಕೆ ಪಡೆದಿಲ್ಲ ಎಂದು ಸಚಿವರಿಗೆ ಸಭೆಯಲ್ಲಿ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಸಾಕಷ್ಟು ಡೋಸ್ ಲಸಿಕೆ ಲಭ್ಯವಿದೆ. ಶಾಲೆ ಆರಂಭಕ್ಕೂ ಮುನ್ನ ಈ ಶಿಕ್ಷಕರಿಗೆ ಲಸಿಕೆ ನೀಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಪ್ರತಿದಿನ 10 ಸಾವಿರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರ ಜೊತೆಗೆ ಗಡಿ ಭಾಗಗಳಿಂದ ಜಿಲ್ಲೆಗೆ ಬರಬೇಕಾದರೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿದ್ದು, ಅಧಿಕಾರಿಗಳು ಸೂಕ್ತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಸಭೆಯಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಹರ್ಷವರ್ಧನ್, ಆರ್. ಧರ್ಮಸೇನ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಮಹಾಪೌರರಾದ ಅನ್ವರ್ ಬೇಗ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ. ಪಂ. ಸಿಇಒ ಎ.ಎಂ.ಯೋಗೀಶ್, ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ನಗರ ಪಾಲಿಕೆಯ ಆಯುಕ್ತ ಜಿ.ಲಕ್ಷ್ಮಿಕಾಂತ್ ರೆಡ್ಡಿ, ಡಿಡಿಪಿಐ, ಡಿಡಿಪಿಯು, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರು, ಮೈಸೂರು ವಿವಿ ಕುಲಸಚಿವರು, ಕೆ.ಎಸ್.ಒ.ಯು, ಕುಲಸಚಿವರು ಇನ್ನಿತರರು ಹಾಜರಿದ್ದರು.

Related