ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ

ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ

ಬೆಂಗಳೂರು : ಸುಮಾರು 5 ತಿಂಗಳ ಬಳಿಕ ಮೆಟ್ರೋ ಸಂಚಾರ ಮತ್ತೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಇಂದು ಖುದ್ದು ಮೆಟ್ರೋದಲ್ಲಿ ವಿಧಾನಸೌಧ ಸ್ಟೇಷನ್ ಇಂದ ಮೆಜೆಸ್ಟಿಕ್ ಸ್ಟೇಷನ್ ವರೆಗೆ ಸಂಚರಿಸಿ ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷಿತ ಪ್ರಯಾಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ್ದಾರೆ.

ಈ ವೇಳೆ ಮಾತನಾಡಿದ ಸಚಿವರು, ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಭಯ ಬೇಡ ಆದ್ರೆ ಎಚ್ಚರಿಕೆ ಅಗತ್ಯ. ಎಲ್ಲಾ ಪ್ರಯಾಣಿಕರು ಸರಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಕರೆ ನೀಡಿದ್ದಾರೆ.

Related