ಯಡಿಯೂರಪ್ಪ ವಿರುದ್ಧ ಹೊಸ ಬಾಂಬ್ ಸಿಡಿಸಿದ ಶಾಸಕ

ಯಡಿಯೂರಪ್ಪ ವಿರುದ್ಧ ಹೊಸ ಬಾಂಬ್ ಸಿಡಿಸಿದ ಶಾಸಕ

ವಿಜಯಪುರ : ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು.

ಈ ವೇಳೆ ಮಾತನಾಡಿದ ಯತ್ನಾಳ್, ಬ್ಲಾಕ್ ಮೇಲ್ ಮಾಡಿದವರಿಗೆ, ಹಣ ಕೊಟ್ಟವರಿಗೆ ಸಚಿವ ಸ್ಥಾನ ನೀಡಲಾಗಿದೆ. ಕೆಲವರು ಸಿಡಿ ತೋರಿಸಿ ಸಿಎಂ ಅವರನ್ನು ಬೆದರಿಸಿ ಸಚಿವ ಸ್ಥಾನ ಪಡೆದುಕೊಳ್ಳುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಲಿಂಗಾಯತ ಸಮುದಾಯದ ಮರ್ಯಾದೆ ತೆಗೆದಿದ್ದಾರೆ. ಸಂಕ್ರಮಣದ ಉತರಾರ್ಧದ ನಂತರ ಬಿ.ಎಸ್.ವೈ ನೈತಿಕತೆ ಇದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬರಲಿ ಎಂದು ಗುಡುಗಿದ್ದಾರೆ.

ಮೂವರು ಶಾಸಕರು ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ಪಡೆದುಕೊಳ್ಳುತ್ತಿದ್ದಾರೆ. ಈ ಮೂವರು ಈ ಹಿಂದೆ ನನ್ನನ್ನು ಭೇಟಿಯಾಗಿದ್ದರು. ನಾವೆಲ್ಲ ಸೇರಿ ಯಡಿಯೂರಪ್ಪನವರನ್ನು ಕೆಳಗಿಳಿಸೋಣ ಎಂದಿದ್ದರು. ಅವರ ಮಾತು ಕೇಳಿ ನನಗೆ ಅಚ್ಚರಿಯಾಗಿತ್ತು. ಇದೀಗ ಸಿಎಂ ಅವರನ್ನು ಬ್ಲಾಕ್ ಮೇಲ್ ಮಾಡಿ ಸಚಿವರಾಗುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Related