ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿ ಸತೀಶ್ ರೆಡ್ಡಿ ನೇಮಕ

ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿ ಸತೀಶ್ ರೆಡ್ಡಿ ನೇಮಕ

ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಸತೀಶ್ ರೆಡ್ಡಿ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇಮಕ ಮಾಡಿದ್ದಾರೆ.

ಮೂರು ಬಾರಿ ಶಾಸಕರಾಗಿ ಗೆದ್ದಿರುವ ಸತೀಶ್ ರೆಡ್ಡಿ ಅವರು ಸತತ 25 ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆ ಮಾಡಿದ್ದು, ಅವರ ಸೇವೆಯನ್ನು ಗುರುತಿಸಿ ರಾಜ್ಯ ಬಿಜೆಪಿ ಪಕ್ಷದ ಕಾರ್ಯದರ್ಶಿಯಾಗಿ ಸತೀಶ್ ರೆಡ್ಡಿ ಅವರನ್ನು ನೇಮಕ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಜಾವಾಹಿನಿ ಜೊತೆ ಮಾತನಾಡಿದ ಶಾಸಕ ಎಂ. ಸತೀಶ್ ರೆಡ್ಡಿ ಅವರು, ಪಕ್ಷ ನನ್ನನ್ನು ಗುರುತಿಸಿ ಕಾರ್ಯದರ್ಶಿ ಸ್ಥಾನ ನೀಡಿರುವುದು ಖುಷಿ ತಂದಿದೆ. ಮುಂಬರುವ ದಿನಗಳಲ್ಲಿ ಬಿಜೆಪಿ ಸಂಘಟನೆಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು. ಈ ಜವಾಬ್ದಾರಿಯನ್ನು ನೀಡಿರುವ ರಾಜ್ಯ  ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ , ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಆರ್. ಅಶೋಕ್ ಇನ್ನಿತರ ಬಿಜೆಪಿ ಮುಖಂಡರೆಲ್ಲರಿಗೂ ಧನ್ಯವಾದ ಅರ್ಪಿಸಿದರು.

Related