ಮೋದಿಯವರಿಗೆ ಸೋಲುತ್ತೇನೆ ಎನ್ನುವ ಭಯ ಉಂಟಾಗಿದೆ: ಡಿಕೆಶಿ

ಮೋದಿಯವರಿಗೆ ಸೋಲುತ್ತೇನೆ ಎನ್ನುವ ಭಯ ಉಂಟಾಗಿದೆ: ಡಿಕೆಶಿ

ಚನ್ನಪಟ್ಟಣ: ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಚುನಾವಣೆಗೆ ಕೇವಲ ಐದು ದಿನಗಳು ಬಾಕಿ ಇದ್ದು, ಎಲ್ಲಾ ಪಕ್ಷದ ಅಭ್ಯರ್ಥಿಗಳು ಬರದಿಂದ ಮತ ಪ್ರಚಾರದಲ್ಲಿ ತೊಡಗಿದ್ದಾರೆ.ಇನ್ನು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಇಂದು ಚನ್ನಪಟ್ಟಣ ದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರ ಭರ್ಜರಿ ಮತ ಮತ ಪ್ರಚಾರದಲ್ಲಿ ತೊಡಗಿದ್ದಾರೆ.

ಮತ ಪ್ರಚಾರದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ ಗೆದ್ದರೆ ಮಾಂಗಲ್ಯಸೂತ್ರ ಕಿತ್ತು ಮುಸ್ಲಿಮರಿಗೆ ನೀಡುತ್ತದೆ ಎಂದು ದೇಶದ ಪ್ರಧಾನಿ ಹೇಳುತ್ತಿದ್ದಾರೆ. ಮೋದಿಯವರಿಗೆ ಸೋಲುತ್ತೇನೆ ಎನ್ನುವ ಭಯ ಉಂಟಾಗಿದೆ ಅದಕ್ಕೆ ಹೀಗೆ ಮಾತನಾಡುತ್ತಿದ್ದಾರೆ. ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬರುವುದಕ್ಕೆ ಸಾಧ್ಯವೇ ಇಲ್ಲ. ಜೆಡಿಎಸ್ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳುತ್ತೇನೆ. ಕುಮಾರಸ್ವಾಮಿ ಅವರಿಗೆ ಧೈರ್ಯ ಇದ್ದಿದ್ದರೆ, ಕರ್ಮಭೂಮಿ ಎಂದು ಕರೆಯುವ ಇದೇ ಕ್ಷೇತ್ರದಲ್ಲಿ ಚುನಾವಣೆಯನ್ನು ಎದುರಿಸಬೇಕಾಗಿತ್ತು ಎಂದು ಅವರಿಗೆ ಸವಾಲು ಹಾಕಿದ್ದೇನೆ.

ಮಾಜಿ ಪ್ರಧಾನಿಗಳು ತಮ್ಮ ಅಳಿಯನನ್ನೇ ಬೇರೆ ಪಕ್ಷದಿಂದ ನಿಲ್ಲಿಸಿದ್ದಾರೆ. ಪ್ರಧಾನ ಮಂತ್ರಿಗಳನ್ನಾಗಿ, ಮಗನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ ಜಿಲ್ಲೆಯನ್ನು ಬಿಟ್ಟು ಬೇರೆ ಜಿಲ್ಲೆಗೆ ಹೋಗಿ ಸ್ಪರ್ಧೆ ಮಾಡುತ್ತಿದ್ದಾರೆ. ಮತ್ತೊಮ್ಮೆ ಅವಕಾಶ ಸಿಕ್ಕರೆ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂಬುದು ನನ್ನ ಆಸೆ. ಈ ಕ್ಷೇತ್ರದ ಜಾತ್ಯಾತೀತ ತತ್ವ, ಸಹಬಾಳ್ವೆಗೆ ಮಾದರಿ. ತಿಗಳ, ಬೆಸ್ತ, ಹಿಂದುಳಿದ, ಪರಿಶಿಷ್ಟ ಜಾತಿ, ಪಂಗಡಗಳ ಜನರು ಅತ್ಯಂತ ಅನ್ಯೋನ್ಯವಾಗಿ ಇಲ್ಲಿ ಜೀವನ ಮಾಡುತ್ತಿದ್ದಾರೆ.

ಚನ್ನಪಟ್ಟಣ ನನಗೆ ತಾಯಿಯಂತೆ ಸಲುಹಿದೆ. ನಾಲ್ಕು ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಕಳುಹಿಸಿದ್ದೀರಿ.  ಈ ಕ್ಷೇತ್ರ ವಿಂಗಡಣೆ ಆಗಿ ನಾನು ಅನಿವಾರ್ಯವಾಗಿ ಬೇರೆ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಾಗ ಸಂಕಟ ಅನುಭವಿಸಿದ್ದೆ. ರಾಜಕೀಯ ಪಲ್ಲಟಗಳಿಂದ ಈ ಕ್ಷೇತ್ರದಲ್ಲಿ ಬೇರೆ ಬೇರೆಯವರು ಬಂದು ಚುನಾವಣೆ ಎದುರಿಸುವಂತಾಯಿತು. ಕಷ್ಟಕಾಲದಲ್ಲಿ ಜೊತೆಗಿದ್ದ ನಿಮ್ಮನ್ನು ನಾನು ಎಂದಿಗೂ ಮರೆಯುವುದಿಲ್ಲ. ಇಲ್ಲಿನ ಕಾರ್ಯಕರ್ತರನ್ನು ಸ್ವಂತ ಕ್ಷೇತ್ರದ ಕಾರ್ಯಕರ್ತರಂತೆ ಭಾವಿಸಿದ್ದೇನೆ ಎಂದರು.

 

Related