ಮೋದಿ ಜಾತಿ ಜಾತಿಗಳ ನಡುವೆ ಕಲಹ ಹುಟ್ಟಿಸುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ

ಮೋದಿ ಜಾತಿ ಜಾತಿಗಳ ನಡುವೆ ಕಲಹ ಹುಟ್ಟಿಸುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ

ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಧರ್ಮ ಸೇರಿದಂತೆ ಭಾವನಾತ್ಮಕ ವಿಚಾರಗಳ ಬಗ್ಗೆ ಮಾತನಾಡುತ್ತಾರೆ ಹೊರತಾಗಿ ದೇಶದಲ್ಲಿ ಬೆಲೆ ಹೆಚ್ಚುತ್ತಿರುವ ಬಗ್ಗೆ ಯಾಕೆ ಮಾತನಾಡುವುದಿಲ್ಲವೆಂದು ಪ್ರಿಯಾಂಕ ಗಾಂಧಿ ಪ್ರಶ್ನಿಸಿದ್ದಾರೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ-ಮುಸ್ಲಿಂ ಬಗ್ಗೆ ಯಾಕೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ. ದೇಶದಲ್ಲಿ ಎಲ್ಲರೂ ಸಮಾನರು. ಎಲ್ಲರೂ ಸಮವಾಗಿ ಬದುಕುವ ಹಕ್ಕಿದೆ. ಚುನಾವಣೆಯಲ್ಲಿ ಹಿಂದುಗಳ ಮತ ಪಡೆಯಲು, ಹಿಂದುಗಳ ಪರವಾಗಿ ಮಾತನಾಡಿ ಮೋದಿಯವರು ಜಾತಿ ಭೇದ ಮಾಡುತ್ತಿದ್ದಾರೆ ಎಂದು ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಶಿಕ್ಷಣ, ನಿರುದ್ಯೋಗ, ಬೆಲೆ ಏರಿಕೆ, ಹೆಣ್ಣುಮಕ್ಕಳ ಸಬಲೀಕರಣ ವಿಚಾರವಾಗಿ ಮೋದಿ ಮಾತನಾಡಲಿ. ದೇಶದಲ್ಲಿ ದೊಡ್ಡ ಸಮಸ್ಯೆಗಳಿವೆ. ಅದನ್ನು ಬಿಟ್ಟು ಸಣ್ಣ ಮಟ್ಟದ ಮಾತನಾಡುತ್ತಾ, ದಿನವಿಡೀ ಸುಳು ಹೇಳುತ್ತಾ ಚುನಾವಣೆ ಎದುರಿಸುತ್ತಿದ್ದಾರೆ. ಅವರು ದೇಶದ, ಜನರ ಸಮಸ್ಯೆಯನ್ನು ಮುಂದಿಟ್ಟು ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದರು.

 

Related