ಸಿಲಿಕಾನ್ ಸಿಟಿಯಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಚಾಲನೆ ನೀಡಿದ ಮೋದಿ

ಸಿಲಿಕಾನ್ ಸಿಟಿಯಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಚಾಲನೆ ನೀಡಿದ ಮೋದಿ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರಕ್ಕೆ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ವಿಸ್ತರಣೆ ಮಾರ್ಗಕ್ಕೆ ಇಂದು(ಅಕ್ಟೋಬರ್ 20)  ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚುವಲ್ ಮೂಲಕ ಮೆಟ್ರೊ ವಿಸ್ತರಣಾ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ್ದಾರೆ.

ಜೊತೆಗೆ ಕೆಂಗೇರಿಯಿಂದ ಚಳ್ಳಘಟ್ಟವರೆಗಿನ ಮೆಟ್ರೋ ವಿಸ್ತರಣಾ ಮಾರ್ಗಕ್ಕೂ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಸಿರು ನಿಶಾನೆ ತೋರಿದ್ದಾರೆ.

ವೈಟ್‌ಫೀಲ್ಡ್ (ಕಾಡುಗೋಡಿ) ನಿಂದ ಚಲ್ಲಘಟ್ಟದವರೆಗಿನ ನೇರಳೆ ಮಾರ್ಗವು ಒಟ್ಟು 43.49 ಕಿಮೀ ಉದ್ದ ಮತ್ತು 37 ಮೆಟ್ರೋ ನಿಲ್ದಾಣಗಳನ್ನು ಒಳಗೊಂಡಿದೆ.

ವೈಟ್‌ಫೀಲ್ಡ್‌ನಿಂದ (ಕಾಡುಗೋಡಿ) ಕೊನೆಯ ರೈಲು ರಾತ್ರಿ 10.45 ಕ್ಕೆ ಮತ್ತು ಉಳಿದ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 11.05 ಕ್ಕೆ ಹೊರಡಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

Related