ನವದೆಹಲಿ: ಇಂದು ಕಾರ್ಗಿಲ್ ಯುದ್ಧ ದಿನವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು (ಶುಕ್ರವಾರ ಜುಲೈ 26) ರಂದು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ.
ಕಾರ್ಗಿಲ್ ವಿಜಯ ದಿವಸ್ನ 25ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಲಡಾಖ್ನಲ್ಲಿರುವ ಡ್ರಾಸ್ಗೆ ಪ್ರಧಾನಿ ತೆರಳಿದರು. ಪ್ರಧಾನಿ ಭೇಟಿಗೆ ಮುನ್ನ ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಭದ್ರತಾ ಉದ್ದೇಶಗಳಿಗೆ ಅನುಗುಣವಾಗಿ ವ್ಯವಸ್ಥೆಗಳನ್ನು ಮಾಡಲಾಗಿತ್ತು.ಇದನ್ನೂ ಓದಿ:ಪತಿ ಕಂಟಕ ದೂರವಾಗಲೆಂದು ದೇವರ ಮೊರೆ ಹೋದ ವಿಜಯಲಕ್ಷ್ಮಿ
ರಾಷ್ಟ್ರಪತಿ ದೌಪದಿ ಮುರ್ಮು ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಯಕರು ಸಹ ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಕಾರ್ಗಿಲ್ ಯುದ್ಧವು 25 ವರ್ಷಗಳ ಹಿಂದೆ ಅಂದರೆ 1999 ರ ಜುಲೈ 26 ರಂದು ಅಧಿಕೃತವಾಗಿ ಕೊನೆಗೊಂಡಿತ್ತು. ಈ ದಿನವನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ಲಡಾಖ್ನ ಕಾರ್ಗಿಲ್ ಜಿಲ್ಲೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯವನ್ನು ಈ ದಿನ ಸ್ಮರಿಸಲಾಗುತ್ತದೆ. ದೇಶಕ್ಕಾಗಿ ಯೋಧರ ಬಲಿದಾನವನ್ನು ನೆನಪಿಸಿಕೊಳ್ಳಲಾಗುತ್ತದೆ.
Tomorrow, 26th July, is a very special day for every Indian. We will mark the 25th Kargil Vijay Diwas. It is a day to pay homage to all those who protect our nation. I will visit the Kargil War Memorial and pay tributes to our brave heroes. Work will also commence for the Shinkun…
— Narendra Modi (@narendramodi) July 25, 2024