ಮೋದಿ ರೋಡ್ ಶೋ ಆರಂಭ

ಮೋದಿ ರೋಡ್ ಶೋ ಆರಂಭ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯವರ ಮೆಗಾ ರೋಡ್ ಶೋ ಪ್ರಾರಂಭಗೊಂಡಿದೆ. ಜೆಪಿ ನಗರದ ಸೋಮೇಶ್ವರ ಸಭಾಭವನದ ಬಳಿ ಮೋದಿ ರೋಡ್ ಶೋ ಗೆ ಚಾಲನೆ ಸಿಕ್ಕಿದ್ದು, ಇಂದು ಸುಮಾರು 26 ಕಿ.ಮೀ ದೂರ ರೋಡ್ ಶೋ ಸಾಗಲಿದೆ. ಸಾವಿರಾರು ಬಿಜೆಪಿ ಕಾರ್ಯಕರ್ತರು, ಪ್ರಧಾನಿಯನ್ನು ನೋಡಲು ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ಜಮಾಯಿಸಿದ್ದಾರೆ.

ಬೆಳಗ್ಗೆ 10 ಗಂಟೆಗೆ ಜೆ.ಪಿ ನಗರ ಬ್ರಿಗೇಡ್ ಮಿಲೇನಿಯಂನಿಂದ ಆರಂಭವಾಗಲಿರುವ ರೋಡ್ ಶೋ. ಸೌತ್ ಎಂಡ್ ಸರ್ಕಲ್, ಕೃಷ್ಣ ರಾವ್ ಪಾರ್ಕ್ ಮೂಲಕ ರಾಮಕೃಷ್ಣ ಆಶ್ರಮ ಮಾರ್ಗವಾಗಿ ಆಗಮನ.

ವಿಧಾನಸಭೆ ಚುನಾವಣೆಗೆ ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದ್ದು ಕೊನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ಪರ ಅಲೆ ಎಬ್ಬಿಸಲು ಸಜ್ಜಾಗಿದ್ದಾರೆ. ಪ್ರಧಾನಿ ಮೋದಿ ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಹೀಗಾಗಿ ಇಡೀ ಬೆಂಗಳೂರು ಕೇಸರಿಮಯವಾಗಿದೆ. ಎಲ್ಲಾ ರೀತಿಯ ಸಿದ್ಧತೆಯೂ ಪೂರ್ಣಗೊಂಡಿದೆ.

Related