ಐಟಿ ದಾಳಿಯಲ್ಲಿ ಸಿಕ್ಕಿರುವ ಹಣಕ್ಕೂ ಕಾಂಗ್ರೆಸ್ ಗೂ ಸಂಬಂಧವಿಲ್ಲ -ದಿನೇಶ್ ಗುಂಡೂರಾವ್

ಐಟಿ ದಾಳಿಯಲ್ಲಿ ಸಿಕ್ಕಿರುವ ಹಣಕ್ಕೂ ಕಾಂಗ್ರೆಸ್ ಗೂ ಸಂಬಂಧವಿಲ್ಲ -ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕರು ಇಲ್ಲದ ಸಲದ ಆರೋಪಗಳನ್ನು ಮಾಡುತ್ತಲೇ ಇರುತ್ತಾರೆ. ನಗರದಲ್ಲಿ ಕಳೆದ ವಾರ ಐಟಿ ದಾಳಿ ಆಗಿರುವುದಕ್ಕೂ ಮತ್ತು ಕಾಂಗ್ರೆಸ್ಸಿಗರು ಯಾವುದೇ ಸಂಬಂಧ ಇಲ್ಲವೆಂದು ಶಾಸಕ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ಇನ್ನು ಬಿಜೆಪಿಯವರಿಗೆ ಮಾಡಲು ಯಾವುದೇ ಕೆಲಸವಿಲ್ಲ ಆದ್ದರಿಂದ ಕಾಂಗ್ರೆಸ್ ಪಕ್ಷದ ವಿರುದ್ಧ ಇಲ್ಲದ ಸಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.

ನಗರದಲಿ ಈ ಸಂಬಂಧ ಮಾತನಾಡಿದ ಅವರು, ಐಟಿ ದಾಳಿಯಲ್ಲಿ ಸಿಕ್ಕಿರುವ ಹಣಕ್ಕೂ ಕಾಂಗ್ರೆಸ್ ಗೂ ಸಂಬಂಧವಿಲ್ಲ. ಬಿಜೆಪಿಯವರಿಗೆ ನಮ್ಮ ಸರಕಾರದ ವಿರುದ್ಧ ಮಾತನಾಡಲು ಯಾವುದೆ ವಿಷಯಗಳಿಲ್ಲ. ಆದುದರಿಂದ, ಆಧಾರ ರಹಿತ ಆರೋಪಗಳನ್ನು ಮಾಡುತ್ತಾ, ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಐಟಿ ದಾಳಿಗೆ ಒಳಗಾದವರು ಯಾರು? ಅವರಿಗೂ ಕಾಂಗ್ರೆಸ್ ಗೂ ಏನು ಸಂಬಂಧ? ಅವರೇನು ಕಾಂಗ್ರೆಸ್ ಕಾರ್ಯಕರ್ತರ ಅಥವಾ ಮುಖಂಡರಾ? ಎಂದು ಪ್ರಶ್ನಿಸಿದ ದಿನೇಶ್ ಗುಂಡೂರಾವ್, ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಐಟಿ, ಈ.ಡಿ ಯವರು ಸಕ್ರಿಯವಾಗಿರುವುದಿಲ್ಲ. ಬಿಜೆಪಿಯೇತರ ಸರಕಾರಗಳು ಅಧಿಕಾರಕ್ಕೆ ಬಂದಾಗ ಇವರು ಸಕ್ರಿಯವಾಗುತ್ತಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರಕಾರವಿದ್ದಾಗ ಬಹಿರಂಗವಾಗಿ ಭ್ರಷ್ಟಾಚಾರ ತಾಂಡವಾಡುತ್ತಿತ್ತು. ಆಗ ಐಟಿ, ಈ.ಡಿ ಯವರು ಯಾರ ಕಣ್ಣಿಗೂ ಕಾಣಿಸುತ್ತಿರಲಿಲ್ಲ. ಅವರ ಕರ್ತವ್ಯ ಅವರು ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಐಟಿ ದಾಳಿಯಲ್ಲಿ ಸಿಕ್ಕಿರುವ ಹಣವನ್ನ ಕಾಂಗ್ರೆಸ್ ನವರಿಗೆ ತಳುಕು ಹಾಕುವುದು ಸರಿಯಲ್ಲ ಎಂದು ಅವರು ಹೇಳಿದರು.

Related