ದ. ಕ ಜಿಲ್ಲೆಯಲ್ಲಿ ಮರಣ ಮೃದಂಗ

ದ. ಕ ಜಿಲ್ಲೆಯಲ್ಲಿ ಮರಣ ಮೃದಂಗ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಮರಣ ಮೃದಂಗ ಮುಂದುವರಿದಿದೆ. ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚಾದಂತೆ ಜನರ ಬಲಿ ಪಡೆದುಕೊಳ್ಳುತ್ತಿದೆ.  ಒಂದೇ ದಿನ ಮೂರು ಕೋವಿಡ್ ಸೋಂಕಿತರು ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.

ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಸೋಂಕಿಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ. ಇದರಿಂದ ಜಿಲ್ಲೆಯ ಸೋಂಕಿತರ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಒಂದೇ ದಿನ ಜಿಲ್ಲೆಯಲ್ಲಿ 97 ಜನರಿಗೆ ಸೋಂಕು ದೃಢವಾಗಿತ್ತು.

ಇದರಿಂದ ಜಿಲ್ಲೆಯ ಕೋವಿಡ್ -19 ಸೋಂಕಿತರ ಸಂಖ್ಯೆ 1012ಕ್ಕೆ ಏರಿಕೆ ಕಂಡಿತ್ತು. ಇದುವರೆಗೆ ಜಿಲ್ಲೆಯಲ್ಲಿ 20 ಮಂದಿ ಸೋಂಕಿತರು ಕೋವಿಡ್ ಕಾರಣದಿಂದ ಮೃತಪಟ್ಟಿದ್ದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.

Related