ಹೊಸ ವರ್ಷಕ್ಕೆ ಇಂದಿರಾ ಕ್ಯಾಂಟೀನ್ ನಲ್ಲಿ ಮುದ್ದೆ, ಚಪ್ಪಾತಿ ಭಾಗ್ಯ!

ಹೊಸ ವರ್ಷಕ್ಕೆ ಇಂದಿರಾ ಕ್ಯಾಂಟೀನ್ ನಲ್ಲಿ ಮುದ್ದೆ, ಚಪ್ಪಾತಿ ಭಾಗ್ಯ!

ಬೆಂಗಳೂರು: ಸಿಲ್ಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಇಂದಿರಾ ಕ್ಯಾಂಟೀನ್ ನಲ್ಲಿ ಮುದ್ದೆ ಸಾಂಬಾರ್ ಮತ್ತು ಚಪಾತಿ ಸಿಗುತ್ತದೆ ಎಂದು ಹೇಳಲಾಗ್ತಿದೆ.

ಹೌದು ಇಲ್ಲಿಯವರೆಗೆ ರಾಜಧಾನಿ ಬೆಂಗಳೂರಿನಲ್ಲಿ ಇರುವಂತಹ ಇಂದಿರಾ ಕ್ಯಾಂಟೀನ್ ಗಳಲ್ಲಿ ಕೇವಲ ಅನ್ನ ಸಾಂಬಾರ್ ರೈಸ್ ಬಾತ್ ಗಳಂತಹ ಕೇವಲ ರೈಸ್ ಐಟಂ ನೀಡಲಾಗುತ್ತಿತ್ತು.

ಆದರಿಗ 2024ನೇ ಹೊಸ ವರ್ಷ ಆರಂಭದಲ್ಲಿಯೇ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಗರದ ಇಂದಿರಾ ಕ್ಯಾಂಟೀನ್ ಗಳಲ್ಲಿ ಮುದ್ದೆ ಚಪಾತಿ ಭಾಗ್ಯ ಸಿಗಲಿದೆ ಎಂದು ಬಿಬಿಎಂಪಿ ಅಧಿಕಾರಿ ತಿಳಿಸಿದ್ದಾರೆ.

ಈವರೆಗೆ ಮಧ್ಯಾಹ್ನ ಮತ್ತು ರಾತ್ರಿ ಕೇವಲ ರೈಸ್‌ ಬಾತ್‌ ಅಥವಾ ಅನ್ನ, ಸಾಂಬರ್‌, ಮೊಸರನ್ನ ಮಾತ್ರ ವಿತರಣೆ ಮಾಡಲಾಗುತ್ತಿತ್ತು. ಹಿರಿಯ ನಾಗರಿಕರು, ಸಕ್ಕರೆ ಕಾಯಿಲೆ ಇರುವವರು ಸೇರಿದಂತೆ ಮೊದಲಾದವರು ಕೇವಲ ರೈಸ್‌ ಪದಾರ್ಥದ ಊಟ ಬೇಡ, ಮುದ್ದೆ, ಚಪ್ಪಾತಿ ನೀಡುವಂತೆ ಕೇಳುತ್ತಿದ್ದರು. ಈ ವಿಚಾರ ಸರ್ಕಾರ ಮತ್ತು ಬಿಬಿಎಂಪಿ ಗಮನಕ್ಕೆ ಬಂದಿತ್ತು. ಹಾಗಾಗಿ, ಹೊಸ ವರ್ಷದಿಂದ ಇಂದಿರಾ ಕ್ಯಾಂಟೀನ್‌ ನಲ್ಲಿ ಕಡ್ಡಾಯವಾಗಿ ಮುದ್ದೆ ಪೂರೈಕೆಗೆ ತೀರ್ಮಾನಿಸಲಾಗಿದೆ.

ನಗರದ ಯಾವುದೇ ಇಂದಿರಾ ಕ್ಯಾಂಟೀನ್‌ಗೆ ಗ್ರಾಹಕ ತೆರಳಿ ಊಟ ಅಥವಾ ಉಪಹಾರದ ಕೋಪನ್ ಪಡೆದರೆ ಆ ಮಾಹಿತಿ ಕೇಂದ್ರ ಕಚೇರಿಗೆ ತಲುಪುವಂತೆ ತಂತ್ರಜ್ಞಾನ ಅಭಿವೃದ್ಧಿ ಪಡಿಸಲಾಗಿದೆ. ಇನ್ನು ಸ್ವಚ್ಛತೆ ಸೇರಿದಂತೆ ಇನ್ನಿತರೆ ಕಾರ್ಯಗಳಿಗೆ ಪ್ರತ್ಯೇಕವಾಗಿ ಆ್ಯಪ್‌ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

 

Related