ಗೌರಿ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್

ಗೌರಿ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಟೀಸರ್ ಹಾಗೂ ಹಾಡುಗಳಿಂದಲೇ ಸಿನಿಮಾ ಪ್ರೇಮಿಗಳಲ್ಲಿ ಕುತೂಹಲ ಹುಟ್ಟಿಸಿರುವ ‘ಗೌರಿ’ ಚಿತ್ರಕ್ಕೆ ಈಗ ಬಿಡುಗಡೆ ಭಾಗ್ಯ ಕೂಡಿಬಂದಿದೆ. ಇದರಿಂದ ಸಿನಿ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಹೌದು, ಇದೇ ಮೊದಲ ಬಾರಿಗೆ ಬೆಳ್ಳಿ ತೆರೆ ಮೇಲೆ ಮಿಂಚುತ್ತಿರುವ ನಟಿ ಸಾನ್ಯಾ ಅಯ್ಯರ್ ಮತ್ತು ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ಈ ಚಿತ್ರದಲ್ಲಿ ನಟಿಸಿದ್ದು, ಈಗಾಗಲೇ ಗೌರಿ ಚಿತ್ರದ ಹಾಡುಗಳು ಮತ್ತು ಟೀಸರ್ ಮೂಲಕವೇ ಸಿನಿ ಪ್ರೇಕ್ಷಕರನ್ನು ಹುಚ್ಚೆಬ್ಬಿಸುತ್ತಿರುವ ಗೌರಿ ಚಿತ್ರ ಆಗಸ್ಟ್ 15ಕ್ಕೆ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ: ನಟಿ ಭಾವನಾ ರಾಮಣ್ಣ ಈಗ ಕೆಎಂಹೆಚ್‌ ಕಪ್‌ಗೆ ರಾಯಭಾರಿ

ಯೆಸ್…‌ಬೆಂಗಳೂರಿನ ಎಂಇಎಸ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಚಿತ್ರತಂಡ ‘ಗೌರಿ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಕನ್ನಡದ ಯುವ ಪ್ರತಿಭೆಗಳನ್ನು ಬೆಳೆಸಿ. ಆಗಸ್ಟ್ 15 ಒಳ್ಳೆಯ ದಿನ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಇದು. ಎಲ್ಲಾ ಕನ್ನಡ ಸಿನಿಮಾಗಳಿಗೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಗೌರಿ ಚಿತ್ರಕ್ಕೆ ಜೆಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಭೇರ್ಗಿ ಹಾಗೂ ಅನಿರುದ್ಧ್​ ಶಾಸ್ತ್ರಿ ಸಂಗೀತ ಸಂಯೋಜಿಸಿದರೆ, ಮ್ಯಾಥ್ಯೂಸ್ ಮನು ರೀ ರೆಕಾರ್ಡಿಂಗ್ ಮಾಡಿದ್ದಾರೆ. ವಿ.ನಾಗೇಂದ್ರ ಪ್ರಸಾದ್, ಕವಿರಾಜ್, ಕೆ.ಕಲ್ಯಾಣ್, ವರದರಾಜ್ ಚಿಕ್ಕಬಳ್ಳಾಪುರ, ಗುಬ್ಬಿ ಹಾಡುಗಳನ್ನು ರಚಿಸಿದ್ದಾರೆ. ಕೈಲಾಶ್ ಖೇರ್, ಚಂದನ್ ಶೆಟ್ಟಿ, ಅನಿರುದ್ಧ್​ ಶಾಸ್ತ್ರಿ, ಜಾವೇದ್ ಅಲಿ, ಅನನ್ಯ ಭಟ್, ನಿಹಾಲ್ ತೌರೋ, ಅದಿತಿ ಸಾಗರ್, ಬಾಲಸುಬ್ರಹ್ಮಣ್ಯಂ, ಪ್ರಜ್ಞಾ ಮರಾಠೆ, ಸಮರ್ಜಿತ್ ಮುಂತಾದವರು ಹಾಡುಗಳನ್ನು ಹಾಡಿದ್ದಾರೆ.

 

Related