ಸಚಿವರ ಭೇಟಿಯಾದ ಶಾಸಕ ಮುನಿರತ್ನ

ಸಚಿವರ ಭೇಟಿಯಾದ ಶಾಸಕ ಮುನಿರತ್ನ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆ ಗೆಲುವಿನ ಬೆನ್ನಲ್ಲೇ ಶಾಸಕ ಮುನಿರತ್ನ ಅವರು ಇಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ.

ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಮುನಿರತ್ನ ಅವರು ರಮೇಶ್ ಜಾರಕಿಹೊಳಿ ಜೊತೆ ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ.

ಇನ್ನು ಮುನಿರತ್ನ ಅವರು ನಿನ್ನೆಯಷ್ಟೇ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರನ್ನು ಭೇಟಿಯಾಗಿ ಗೆಲುವಿನ ಸಂಭ್ರಮ ಹಂಚಿಕೊAಡಿದ್ದರು.

Related