ಪ್ರೇಯಸಿಗೆ ಕೊಲೆ ಯತ್ನ

ಪ್ರೇಯಸಿಗೆ ಕೊಲೆ ಯತ್ನ

ಹೈದರಾಬಾದ್  :  ಗೆಳಯನೇ ತನ್ನ ಗೆಳತಿಯ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಇಂದು ನಡೆದಿದೆ.

ಶ್ರೀಕಾಂತ್ ಗೆಳತಿ ಪ್ರಿಯಾಂಕ ಮೇಲೆ ಚಾಕುವಿನಿಂದ ದಾಳಿ ನಡೆಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಡುರಸ್ತೆಯಲ್ಲಿ ದಾಳಿ ನಡೆದಿದ್ದು, ಸ್ಥಳೀಯರು ಇಬ್ಬರನ್ನೂ ಕೆಜಿಹೆಚ್ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವತಿಯ ಕತ್ತಿನ ಭಾಗದಲ್ಲಿ ದೊಡ್ಡ ಪ್ರಮಾಣದ ಗಾಯಗಳಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಶ್ರೀಕಾಂತ್ ಮತ್ತು ಪ್ರಿಯಾಂಕ ಪರಸ್ಪರ ಪ್ರೀತಿಸುತ್ತಿದ್ದರು ಎಂದು ವರದಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Related