ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರಿನ ಮೇಲೆ ಎಲ್ಲಿಲ್ಲದ ಪ್ರೀತಿ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಟ್ಟಿ ಬೆಳೆದಿದ್ದು ಓದಿದ್ದೆಲ್ಲ ಮೈಸೂರಿನಲ್ಲಿ ಹಾಗಾಗಿ ಸಿದ್ದರಾಮಯ್ಯ ಅವರಿಗೆ ಮೈಸೂರಿ ಎಂದರೆ ಎಲ್ಲಿಲ್ಲದ ಪ್ರೀತಿ.
ಇಂದು ಮೈಸೂರಿನಲ್ಲಿ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಹಿಂದಿನ ಕಾಲೇಜು ದಿನಗಳ ನೆನಪಾಯಿತು ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕರಿಗೆ ನಾಚಿಕಯಾಗಬೇಕು: ಡಿಸಿಎಂ
ಈ ಬಗ್ಗೆ ಸೋಶಿಯಲ್ ಮೀಡಿಯಾ ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶವನ್ನು ಹಂಚಿಕೊಂಡಿರುವ ಅವರು, ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು.
ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ. ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು.
ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು.
ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ.
ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು.
ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ.— Siddaramaiah (@siddaramaiah) May 24, 2024