ನಳೀನ್ ಒಬ್ಬ ಕಾಡು ಮನುಷ್ಯ- ಸಿದ್ದು

ನಳೀನ್ ಒಬ್ಬ ಕಾಡು ಮನುಷ್ಯ- ಸಿದ್ದು

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ, ನಾಗರಕ ಜಗತ್ತಿನಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯಲ್ಲಿ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ ಎಂದು ವ್ಯಂಗ್ಯವಾಡಿದ್ದಾರೆ.

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿಎಸ್‌ಯಡಿಯೂರಪ್ಪ ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದರು.

Related