ಉತ್ತರ ಕರ್ನಾಟಕದಲ್ಲಿ ನಮೋ ಅಬ್ಬರ

ಉತ್ತರ ಕರ್ನಾಟಕದಲ್ಲಿ ನಮೋ ಅಬ್ಬರ

ಬೆಳಗಾವಿ: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೊದಲ ಹಂತದ 14 ಕ್ಷೇತ್ರದಲ್ಲಿ ಶುಕ್ರವಾರ ಏಪ್ರಿಲ್ 26ರಂದು ಮತದಾನ ಮುಕ್ತಾಯಗೊಂಡಿದ್ದು, ಇನ್ನುಳಿದ 14 ಕ್ಷೇತ್ರಗಳಲ್ಲಿ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕ ಭಾಗದಲ್ಲಿ ಅಬ್ಬರದ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: ಬ್ಯಾಡ್ಮಿಂಟನ್ ಆಟಗಾರ ಅನುಪ್ ಶ್ರೀಧರ್ ಮತದಾನ

ಹೌದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇನ್ನುಳಿದ 14 ಕ್ಷೇತ್ರದ ಮತದಾನದ ಕುರಿತು ನಾಳೆ ಅಂದರೆ ಏಪ್ರಿಲ್ 28ರಂದು ದೇಶದ ಪ್ರಧಾನಿ ಉತ್ತರ ಕರ್ನಾಟಕ ಭಾಗದಲ್ಲಿ ಅಬ್ಬರದ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.

ಎಪ್ರಿಲ್ 28ರಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ರ್ಯಾಲಿ ಮಾಡುವ ಮೂಲಕ ಬೃಹತ್ ರೋಡ್ ಶೋ ಮತ್ತು ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಬೆಳಿಗ್ಗೆ 11ಕ್ಕೆ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ.

ಬೆಳಗಾವಿ ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಇನ್ನು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲೂ ಬಿಜೆಪಿ ತನ್ನದೆಯಾದ ಪ್ರಭಾವ ಹೊಂದಿದೆ. ಹೀಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರ ಮೃಣಾಲ್​ ಹೆಬ್ಬಾಳ್ಕರ್​​ ಅವರನ್ನು ಕಣಕ್ಕಿಳಿಸಿ, ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಅವರನ್ನು ಮಣಿಸಲು ರಣತಂತ್ರ ರೂಪಿಸಿದ್ದಾರೆ.

 

Related