ಸಿಎಂ, ಡಿಸಿಎಂ​ಗೆ ಶುಭಕೋರಿದ ನಮೋ

ಸಿಎಂ, ಡಿಸಿಎಂ​ಗೆ ಶುಭಕೋರಿದ ನಮೋ

ಬೆಂಗಳೂರು: ಕರ್ನಾಟಕ ರಾಜ್ಯದ 24ನೆಯ ಮುಖ್ಯಮಂತ್ರಿಯಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಹೌದು, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಪದಗ್ರಹಣ ಮಾಡಿದ ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಕೋರಿದ್ದಾರೆ. ಇವರಲ್ಲದೆ, ಕರ್ನಾಟಕ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಹೆಚ್​ಡಿ ಕುಮಾರಸ್ವಾಮಿ ಅವರು ಕೂಡ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ಟ್ವೀಟ್ ಮೂಲಕ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ, “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್​ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು” ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಅವರಿಗೆ ಶುಭಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದರು.

 

Related