ಗೋವಾ ಪ್ರವಾಸದಲ್ಲಿ ನಮೋ

ಗೋವಾ ಪ್ರವಾಸದಲ್ಲಿ ನಮೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರ ಗೋವಾ ಪ್ರವಾಸ ಕೈಗೊಂಡಿದ್ದು ವಿವಿಧ ರೀತಿಯ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಮೋದಿ ಅವರು (ಅ. 26.ಗುರುವಾರ) ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ‘ನಮೋ ಶೇತ್ಕರಿ ಮಹಾಸಮ್ಮಾನ್ ನಿಧಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ ಮತ್ತು ಮಹಾರಾಷ್ಟ್ರದಲ್ಲಿ ಸುಮಾರು 7,500 ಕೋಟಿ ರೂ.ಗಳ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮೋದಿಯವರು ಗೋವಾಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಮೊದಲ ಬಾರಿಗೆ ಆಯೋಜಿಸಲಾಗುತ್ತಿರುವ 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.

ಪ್ರಧಾನಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಶಿರಡಿ ತಲುಪಲಿದ್ದು, ಅಲ್ಲಿ ಶ್ರೀ ಸಾಯಿಬಾಬಾ ಸಮಾಧಿ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಮಾಡಲಿದ್ದು, ದೇವಸ್ಥಾನದಲ್ಲಿ ನೂತನ ದರ್ಶನ ಸರತಿ ಸಾಲು ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ.

 

Related