ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ವಿವಿಧ ಸಮಾಜಮುಖಿ ಕಾರ್ಯಕ್ರಮ ಆಯೋಜನೆ

ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ವಿವಿಧ ಸಮಾಜಮುಖಿ ಕಾರ್ಯಕ್ರಮ ಆಯೋಜನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ 72 ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ನಗರದ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ತಾಯಿ ಮಡಿಲು ಸಾಂಸ್ಕೃತಿಕ ಸಂಸ್ಥೆಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀಮತಿ ತಾರಾ ಅನುರಾಧ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕಿ ಶ್ರೀಮತಿ ಬನಶಂಕರಮ್ಮ ವಿ ಅಂಗಡಿ, ಗಂಡಸಿ ಸದಾ ನಂದ ಸ್ವಾಮೀ, ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಮಮತಾ ಅಶೋಕ್ ಮುಂತಾದವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Related