ನೆಗಟಿವ್ ರಿಪೋರ್ಟ್ ಕಡ್ಡಾಯ : ಸಚಿವ

ನೆಗಟಿವ್ ರಿಪೋರ್ಟ್ ಕಡ್ಡಾಯ : ಸಚಿವ

ಔರಾದ್ : ತಾಲ್ಲೂಕಿನ ಎಕಂಬಾ ಚೆಕ್ ಪೋಸ್ಟ್ಗೆ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಅವರು ಸೋಮವಾರ ಭೇಟಿ ನೀಡಿ ಕಡ್ಡಾಯವಾಗಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಬರುವ ಅಂತಾರಾಜ್ಯ ಪ್ರಯಾಣಿಕರಿಗೆ ಮಾತ್ರ ಗಡಿ ಒಳಗಡೆ ಪ್ರವೇಶಕ್ಕೆ ಅನುಮತಿ ನೀಡಬೇಕು ಸಚಿವ ಚವ್ಹಾಣ ತಿಳಿಸಿದ್ದಾರೆ.

ಅಂತಾರಾಜ್ಯ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ ತಂದವರಿಗೆ ಮಾತ್ರ ಟಿಕೇಟ್ ಪಡೆದು ಪ್ರಯಾಣಿಸಲು ಅನುಮತಿ ನೀಡುವಂತೆ ಕಟ್ಟಪ್ಪಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿವಿಧೆಡೆ ಚೆಕ್ ಪೋಸ್ಟ್ ಸ್ಥಾಪನೆ

ಔರಾದ್ (ಬಿ) ತಾಲ್ಲೂಕಿನಲ್ಲಿ 4 ಚೆಕ್ ಪೋಸ್ಟ್ಗಳನ್ನು ತೆರೆದು ಗಡಿರಾಜ್ಯದಿಂದ ಬರುತ್ತಿರುವ ಪ್ರಯಾಣಿಕರನ್ನು ಪರಿಶೀಲಿಸಿ ಬಿಡಬೇಕು ಎಂದರು.

ಕೋವಿಡ್ ಮೂರನೇ ಅಲೆ ತಡೆಯಲು ಅಗತ್ಯ ಮುಂಜಾಗ್ರತೆ ವಹಿಸಬೇಕು, ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಪೊಲೀಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ಚೆಕ್‌ಪೋಸ್ಟ್ಗಳ ಮೇಲೆ ಕಣ್ಗಾವಲಿರಿಸಿ ಪ್ರತಿ ದಿನವು ಮೇಲ್ವಿಚಾರಣೆ ಕೈಗೊಳ್ಳಬೇಕು ಆದ್ದರಿಂದ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸಿ ಸಹಕರಿಸಬೇಕು ಎಂದು ಕೋರಿದ್ದಾರೆ.

Related