NEP ರದ್ದುಗೊಳಿಸಲು ಸರ್ಕಾರ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯವೇನು?

NEP ರದ್ದುಗೊಳಿಸಲು ಸರ್ಕಾರ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯವೇನು?

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾರಿ ಮಾಡಿರುವ NEP ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈಗಿರುವ ಕಾಂಗ್ರೆಸ್ ಸರ್ಕಾರ ರದ್ದು ಮಾಡಲು ಮುಂದಾಗಿದ್ದು ಇದರಿಂದ ಈಗಾಗಲೇ NEP ಶಿಕ್ಷಣ ನೀತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳ ಭವಿಷ್ಯ ಏನಾಗಬಹುದು ಎಂಬ ಪ್ರಶ್ನೆ ಎಲ್ಲರಲ್ಲಿ ಮೂಡಿದೆ.

ಇನ್ನುಈ ಸಂಬಂಧ ಕುಲಪತಿಗಳೊಂದಿಗೆ ಚರ್ಚೆ ನಡೆಸಿದ್ದು ನೂತನ ಸಮಿತಿ ರಚಿಸಲು ನಿರ್ಧರಿಸಿದೆ. ಇನ್ನೊಂದು ವಾರದಲ್ಲಿ ಸಮಿತಿ ರಚಿಸಲಿದ್ದು ಮುಂದಿನ ವರ್ಷದಿಂದ ರಾಜ್ಯಕ್ಕೆ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ಜಾರಿಗೂಳಿಸುವ ಸಂಬಂಧ ಸಭೆ ನಡೆಸಲಾಯಿತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದ ಎಲ್ಲ ವಿಶ್ವ ವಿದ್ಯಾಲಯ ಕುಲಪತಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಎನ್ ಇ ಪಿ ಯ ಸಾಧಕ ಬಾಧಕದ ಬಗ್ಗೆ ಕುಲಪತಿಗಳಿಂದ ಅಭಿಪ್ರಾಯ ಪಡೆಯಲಾಯಿತು. ಬಳಿಕ ಸಿಎಂ, ಡಿಸಿಎಂ, ಉನ್ನತ ಶಿಕ್ಷಣ ಸಚಿವರು ಪ್ರತ್ಯೇಕ ಸಭೆ ನಡೆಸಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ರದ್ದುಪಡಿಸಿ ರಾಜ್ಯ ಶಿಕ್ಷಣ ನೀತಿಯನ್ನ ರೂಪಿಸಲು ತೀರ್ಮಾನ ಮಾಡಿದ್ರು.

ಹೊಸ ಶಿಕ್ಷಣ ನೀತಿ ರಚನೆಗೆ ನೂತನ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಿದ್ದು ಇನ್ನೊಂದು ವಾರದಲ್ಲಿ ಸಮಿತಿ ರಚನೆಯಾಗಲಿದೆ. ಸಭೆ ಬಳಿಕ ಮಾತನಾಡಿದ ಡಿಸಿಎಂ ನಾಗ್ಪುರ್ ಎಜುಕೇಷನ್ ಪಾಲಿಸಿಯನ್ನ ನಾವು ಒಪ್ಪೊಲ್ಲ ಎಂದು ಗುಡುಗಿದ್ರು.

 

Related