ರಾಜ್ಯ ಬಿಜೆಪಿಯಲ್ಲಿ ಹೊಸ ಲೆಕ್ಕಾಚಾರ!

ರಾಜ್ಯ ಬಿಜೆಪಿಯಲ್ಲಿ ಹೊಸ ಲೆಕ್ಕಾಚಾರ!

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ  ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದರಿಂದ ರಾಜ್ಯ ಬಿಜೆಪಿಯಲ್ಲಿ ಕೆಲವು ಬಿಜೆಪಿ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ, ಇನ್ನೂ ಕೆಲವು ನಾಯಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದಲ್ಲಿ ಬಿಜೆಪಿಯ ಹಿರಿಯ ನಾಯಕರುಗಳು ಬಿಜೆಪಿ ತೊರೆಯಲು ಮುಂದಾಗಿದ್ದರು ಆದರೆ ಬಿವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷನ ಸ್ಥಾನ ಸಿಕ್ಕಿರುವುದರಿಂದ ಬಿಜೆಪಿ ಪಕ್ಷ ತೊರೆಯಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಹೌದು. ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬೆನ್ನಲ್ಲೇ ಪಕ್ಷದಲ್ಲಿ ಯಡಿಯೂರಪ್ಪ ಕೈ ಮೇಲಾಗಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನೇ ನಂಬಿ ಬಂದಿದ್ದ ಆಪರೇಷನ್ ಶಾಸಕರ ಲೆಕ್ಕಾಚಾರವೇ ಬದಲಾಗಿದೆ. ಕಾಂಗ್ರೆಸ್ ಕದ ತಟ್ಟುತ್ತಿದ್ದ ಶಾಸಕ ಎಸ್​ಟಿ ಸೋಮಶೇಖರ್ ಸಹ ಮುಂದಿನ ನಿರ್ಧಾರ ಕೈಗೊಳ್ಳುವ ಬಗ್ಗೆ ಗೊಂದಲದಲ್ಲಿ ಸಿಲುಕಿದ್ದಾರೆ.

ಏಕಾಏಕಿ ನಿರ್ಧಾರ ಮಾಡುವ ಬದಲು ಕಾದು ನೋಡುವ ಮೊರೆ ಹೋಗಿದ್ದಾರೆ. ಇನ್ನು ವಿಜಯೇಂದ್ರ ಅಧ್ಯಕ್ಷರಾಗಿ ಆಯ್ಕೆಯಾಗಿತ್ತಿದ್ದಂತೆಯೇ ಯಡಿಯೂರಪ್ಪ ನಿವಾಸಕ್ಕೆ ಮುನಿರತ್ನ ಹಾಗೂ ಬೈರತಿ ಬಸವರಾಜ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇನ್ನು ಯಡಿಯೂರಪ್ಪ ಮಾತಿನ ಮೇಲೆ ನಿಂತಿದ್ದೇನೆ. ಯಡಿಯೂರಪ್ಪ ಒಂದು ಮಾತು ಹೇಳಿದ್ದಾರೆ ಎಂದು ಪದೇ ಪದೇ ಹೇಳುತ್ತಿದ್ದ ಸೋಮಶೇಖರ್ ಸಹ ಪಕ್ಷ ಬಿಡಲು ಹಿಂದೇಟು ಹಾಕುವಂತೆ ಮಾಡಿದೆ. ಮತ್ತೊಂದೆಡೆ ಅವರು ಬರುತ್ತಾರೆ, ಇವರು ಬರುತ್ತಾರೆ ಎಂದು ಕಾದು ಕುಳಿತುಕೊಂಡಿರುವ ಕಾಂಗ್ರೆಸ್​ಗೆ ಕೊಂಚ ನಿರಾಸೆಯಾಗಿದೆ.

 

Related