ಹೊಸ ಕ್ರಿಮಿನಲ್ ಕಾನೂನು ಜಾರಿ; ಗೃಹ ಸಚಿವರು ಹೇಳಿದ್ದೇನು..?

ಹೊಸ ಕ್ರಿಮಿನಲ್ ಕಾನೂನು ಜಾರಿ; ಗೃಹ ಸಚಿವರು ಹೇಳಿದ್ದೇನು..?

ಬೆಂಗಳೂರು: ಇಂದಿನಿಂದ  (ಸೋಮವಾರ ಜುಲೈ 01) ದೇಶದಾದ್ಯಂತ ಹೊಸ ಕ್ರಿಮಿನಲ್ ಕಾನೂನು ಜಾರಿಯಾಗಿದ್ದು, ಈ ಹೊಸ ಕ್ರಿಮಿನಲ್ ಕಾನೂನು ಜಾರಿಯಾಗುತ್ತಿದ್ದಂತೆ ಇದೀಗ ಮೊದಲ FIR ದಾಖಲಾಗಿದೆ.

ಇನ್ನು ಹೊಸ ಕ್ರಿಮಿನಲ್ ಕಾನೂನಿನ ಬಗ್ಗೆ ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆಸಿದ್ದು, ಕಾನೂನುಗಳ ಜಾರಿಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ಮುಂದೆ ದಾಖಲಾಗುವ ಕೇಸ್​ಗಳಿಗೆ ಅದು ಅನ್ವಯ ಆಗಲಿದೆ. ಇದರ ಪರಿಣಾಮ ಏನು ಅಂತ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಯಶಸ್ಸು ಗೊತ್ತಾಗುತ್ತದೆ. ಇವತ್ತಿನಿಂದ ಆಚೆಗೆ ಯಾವೆಲ್ಲ ಕೇಸ್​ಗಳು ಬರುತ್ತವೋ ಅವು ಹೊಸ ಕಾನೂನುಗಳಡಿ ದಾಖಲಾಗುತ್ತವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ನೀಡಿದ್ದೇವೆ ಎಂದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನ್ಸ್‌ಟೇಬಲ್​ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ. ಇಡೀ ದೇಶದಲ್ಲಿ ಮೂರು ಕಾನೂನುಗಳು ಜಾರಿಯಾಗಿವೆ. ಫೀಡ್ ಬ್ಯಾಕ್ ನೋಡಿಕೊಂಡು ಪರಿಷ್ಕರಣೆ ಮಾಡಬಹುದು ಎಂದರು. ಇದನ್ನೂ ಓದಿ: ಕೆ ಎಸ್ ಈಶ್ವರಪ್ಪ ಮತ್ತೆ ಬಿಜೆಪಿ ಸೇರ್ಕೊಳ್ತಾರಾ..?

ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರುತ್ತಿದ್ದಂತೆ, ಭಾರತೀಯ ನಾಗ್ರಿಕ್ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 173 ರ ಅಡಿಯಲ್ಲಿ ಮೊದಲ ಎಫ್‌ಐಆರ್ ಅನ್ನು ಸೋಮವಾರ ದೆಹಲಿಯಲ್ಲಿ ದಾಖಲಿಸಲಾಗಿದೆ.

ದೆಹಲಿ ರೈಲು ನಿಲ್ದಾಣದಲ್ಲಿ ಫುಟ್‌ ಓವರ್‌ ಬ್ರಿಡ್ಜ್‌ಗೆ ಅಡ್ಡಿಪಡಿಸಿ ಮಾರಾಟ ನಡೆಸಿದ ಬೀದಿಬದಿ ವ್ಯಾಪಾರಿಯೊಬ್ಬನ ಮೇಲೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್‌ 285ರ ಅಡಿಯಲ್ಲಿ ಕೇಸು ದಾಖಲಾಗಿದೆ.

 

Related