ನೂತರ ರಾಷ್ಟ್ರಪತಿ ಭಾಷಣ

ನೂತರ ರಾಷ್ಟ್ರಪತಿ ಭಾಷಣ

ನವದೆಹಲಿ, ಜುಲೈ 25: ಭಾರತವು 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರಪತಿಯಾಗಿ ಆಯ್ಕೆ ಆಗಿರುವುದು ವಿಶೇಷ ಗೌರವ ಎಂದು ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ.

ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸೆಂಟ್ರಲ್ ಹಾಲ್‌ನಲ್ಲಿ ಮೊದಲ ಬಾರಿ ಭಾಷಣ ಮಾಡಿದ ಅವರು, ತಮ್ಮ ಮಾತುಗಳ ಮೂಲಕ ಭರ್ಜರಿ ಚಪ್ಪಾಳೆಯನ್ನು ಗಿಟ್ಟಿಸಿಕೊಂಡರು.

ಭಾರತದ 15ನೇ ರಾಷ್ಟ್ರಪತಿಯಾಗಿ ಸೆಂಟ್ರಲ್ ಹಾಲ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮುರ್ಮು ಮೊದಲ ಭಾಷಣದಲ್ಲಿ ಏನೆಲ್ಲಾ ಉಲ್ಲೇಖಿಸಿದರು ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

“ಎಲ್ಲಾ ಭಾರತೀಯರ ನಿರೀಕ್ಷೆಗಳು, ಆಕಾಂಕ್ಷೆಗಳು ಮತ್ತು ಹಕ್ಕುಗಳ ಸಂಕೇತವಾಗಿದೆ. ಸಂಸತ್ತಿನಲ್ಲಿ ನಿಂತು ನಾನು ನಿಮ್ಮೆಲ್ಲರಿಗೂ ವಿನಮ್ರವಾಗಿ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಈ ಹೊಸ ಜವಾಬ್ದಾರಿಯನ್ನು ನಿರ್ವಹಿಸಲು ನಿಮ್ಮ ನಂಬಿಕೆ ಮತ್ತು ಬೆಂಬಲ ನನಗೆ ಪ್ರಮುಖ ಶಕ್ತಿಯಾಗಿದೆ,” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು.

Related