ಕೊರೋನಾ ನಿಯಂತ್ರಣಕ್ಕೆ ಹೊಸ ನಿಯಮ

ಕೊರೋನಾ ನಿಯಂತ್ರಣಕ್ಕೆ ಹೊಸ ನಿಯಮ

ಬೆಂಗಳೂರು : ಗ್ರಾಮೀಣ ಭಾಗದಲ್ಲಿ ಕೊರೋನಾ ತಡೆಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಮಾಡಿದ್ದು, ಸೋಂಕಿತರು ಕಡ್ಡಾಯವಾಗಿ ಪ್ರಾಥಮಿಕ ಚಿಕಿತ್ಸೆ ಕೇಂದ್ರದ ಕೋವಿಡ್ ರ್ಸೆಂಟರ್‌ಗೆ ಸೋಂಕಿತ ದಾಖಲಾಗಬೇಕು. ಹೋಂ ಐಸೋಲೇಶನ್‌ನಲ್ಲಿ ಕೋವಿಡ್ ನಿಯಮ ಪಾಲನೆ ಆಗದಿರುವ ಕಾರಣ ಸೋಂಕು ತಡೆಗೆ ಸರ್ಕಾರ ಈ ದಿಟ್ಟ ಕ್ರಮ ತೆಗೆದುಕೊಂಡಿದೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ ಸುಧಾಕರ್ ಇನ್ನು ಮುಂದೆ ಪ್ರತ್ಯೇಕ ಕೊಠಡಿ, ಶೌಚಾಲಯದ ವ್ಯವಸ್ಥೆ ಇಲ್ಲದೆ ಇರೋರಿಗೆ ಹೋಂ ಐಸೋಲೇಶನ್ ಇರುವುದಿಲ್ಲ. ಪ್ರತ್ಯೇಕ ಕೊಠಡಿ, ಶೌಚಾಲಯ, ವ್ಯವಸ್ಥೆ ಇದ್ದರೆ ಮಾತ್ರ ಹೋಂ ಐಸೋಲೇಶನ್‌ಗೆ ಅವಕಾಶ ಎಂದು ಸ್ಪಷ್ಟ ಪಡಿಸಿದರು.

ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಳ ಆಗುತ್ತಿದ್ದು ಇದನ್ನು ತಡೆಯಲು ಕೋವಿಡ್ ಕೇರ್ ಸೆಂಟರ್‌ನಲ್ಲಿಯೇ ಕಡ್ಡಾಯವಾಗಿ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು. ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ಹೆಚ್ಚಳ ವಿಚಾರವಾಗಿ ಟಾಸ್ಕ್ಫೋರ್ಸ್ನಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮನೆಯಲ್ಲಿ ಐಸೋಲೇಶನ್ ಇರುವುದರಿಂದ ಸೋಂಕು ಹರಡುತ್ತಿದೆ.ಇದನ್ನು ತಪ್ಪಿಸಲು ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.

ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಗ್ರಾಮೀಣ ಪ್ರದೇಶಗಳಿಗೆ ಹಬ್ಬುತ್ತಿದ್ದು ಅಲ್ಲಿ ಸೋಂಕಿತರನ್ನು ಯಾವ ರೀತಿ ಕ್ವಾರಂಟೈನ್‌ಗೆ ಒಳಪಡಿಸಬೇಕು ಅವರಿಗೆ ಯಾವ ರೀತಿ ಚಿಕಿತ್ಸೆ ನೀಡಬೇಕು, ಹಳ್ಳಿ ಜನರಿಗೆ ಯಾವ ರೀತಿ ಅರಿವು ಮೂಡಿಸಬೇಕೆಂಬ ಬಗ್ಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿತ ವ್ಯಕ್ತಿಗಳು ಮನೆಗಳಲ್ಲಿಯೇ ಐಸೊಲೇಷನ್ ಆದವರಿಂದ ಸೋಂಕು ಹೆಚ್ಚು ಹರಡುತ್ತಿದೆ. ಐಸೊಲೇಷನ್ ನಿಯಮಗಳು ಸರಿಯಾಗಿ ಪಾಲಿಸದೆ. ಐಸೊಲೇಷನ್‌ಗಳಿಗೆ ವ್ಯವಸ್ಥೆಯಿಲ್ಲದೆ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಎಂಬ ಖಚಿತ ಮಾಹಿತಿ ಬಂದಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಚಿಕಿತ್ಸಾ ವಲಯಗಳನ್ನು ಹೋಬಳಿ, ತಾಲ್ಲೂಕು ಮಟ್ಟದಲ್ಲಿ ಕೋವಿಡ್ ಕೇರ್‌ಸೆಂಟರ್‌ಗಳಲ್ಲಿ ಸೋಂಕಿತರನ್ನು ಇರಿಸಬೇಕು ಎಂದು ಸರ್ಕಾರ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಗಳು ಇದನ್ನು ಸರಿಯಾಗಿ ನೋಡಿಕೊಳ್ಳಬೇಕು ಎಂದು ಸಚಿವ ಸುಧಾಕರ್ ಹೇಳಿದರು.

Related