ಬೆಳಗಾವಿ: ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆದ್ದು ಅಧಿಕಾರದ ಗದ್ದುಗೆಯನ್ನು ಏರಿದೆ. ಇನ್ನು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನ ಅಥವಾ ಡಿಕೆ ಶಿವಕುಮಾರ ಎನ್ನುವ ಗೊಂದಲಕ್ಕೆ ಹೈಕಮಂಡ್ ತೆರೆಯಲಿದೆ. ಇದರ ಮಧ್ಯದಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದು ಕಾಂಗ್ರೆಸ್ಸಿನಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಶಾಸಕ ವಿಶ್ವಾಸ್ ವೈದ್ಯ ಹೊಸ ಬಾಂಬ್ ಸಿಡಿಸಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಕಂಪನ ಸೃಷ್ಟಿಸಿದೆ.
ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಮಾತನಾಡಿದ ವಿಶ್ವಾಸ್ ವೈದ್ಯ, ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ. ಸತೀಶ್ ಜಾರಕಿಹೊಳಿ ಪ್ರಭಾವಿ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ. ಸತೀಶ್ ಜಾರಕಿಹೊಳಿಯನ್ನು ಸಿಎಂ ಆಗಿ ನೋಡಬೇಕೆಂದು ಹೇಳುತ್ತಿದ್ದಾರೆ. ಮುಂದಿನ ದಿನದಲ್ಲಿ ಬೆಳಗಾವಿ ಗಡಿ ಭಾಗದಿಂದ ಒಬ್ಬ ಸಿಎಂ ಆಗುತ್ತಾರೆ. ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ ಸತೀಶ್ ಜಾರಕಿಹೊಳಿ ಅಣ್ಣ ಸಿಎಂ ಆಗುವುದು ಕೂಡ ಅಷ್ಟೇ ಸತ್ಯ ಎಂದರು.