ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಮದುವೆ: ಎಚ್ಡಿಕೆ ಘೋಷಣೆ

ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಮದುವೆ: ಎಚ್ಡಿಕೆ ಘೋಷಣೆ

ರಾಮನಗರ, ಫೆ. 3 : ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಮದುವೆಯನ್ನು ರಾಮನಗರದಲ್ಲೇ ನಡೆಸುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಚನ್ನಪಟ್ಟಣದ ಶತಮಾನೋತ್ಸವ ಭವನದಲ್ಲಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಹಕ್ಕೊತ್ತಾಯ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.

‘‘ಫೆ. 10ಕ್ಕೆ ಬೆಂಗಳೂರಿನಲ್ಲಿ ನಿಶ್ಚಿತಾರ್ಥ ನಡೆಯಲಿದೆ. ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಜಿಲ್ಲೆಯಾದ ರಾಮನಗರದಲ್ಲಿ ಮದುವೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದೇನೆ. ಜಿಲ್ಲೆಯ ಜನರ ಋುಣ ನನ್ನ ಮೇಲಿದೆ. ಜಿಲ್ಲೆಯ ನನ್ನ ಜನರಿಗೆ ಮದುವೆ ಊಟ ಹಾಕಬೇಕಿದೆ. ಪ್ರತಿ ಮನೆಗೂ ಮದುವೆ ಆಹ್ವಾನ ಪತ್ರಿಕೆ ಕೊಡುವ ವ್ಯವಸ್ಥೆ ಮಾಡಿದ್ದೇನೆ,’’ ಎಂದರು. “ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಜಿಲ್ಲೆಯಾದ ರಾಮನಗರದಲ್ಲಿ ಮದುವೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದೇನೆ. ಜಿಲ್ಲೆಯ ಜನರ ಋುಣ ನನ್ನ ಮೇಲಿದೆ. ಜಿಲ್ಲೆಯ ನನ್ನ ಜನರಿಗೆ ಮದುವೆ ಊಟ ಹಾಕಬೇಕಿದೆ. ಪ್ರತಿ ಮನೆಗೂ ಮದುವೆ ಆಹ್ವಾನ ಪತ್ರಿಕೆ ಕೊಡುವ ವ್ಯವಸ್ಥೆ ಮಾಡಿದ್ದೇನೆ,’’ ಎಂದು ಕುಮಾರಸ್ವಾಮಿ ಹೇಳಿದರು.

Related