ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್

ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್

ಬೆಂಗಳೂರು: ರಾಜ ರಾಜಕೀಯದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಲವಾರು ರೀತಿಯ ಬದಲಾವಣೆಗಳು ಕಂಡು ಬರುತ್ತಿದ್ದುಇಂದು (ಅ.28 ಶನಿವಾರ) ಆಂಧ್ರ ಪ್ರದೇಶ್ ಮುಖ್ಯಮಂತ್ರಿ ಯೋಗಿನಾಥ್ ಅವರನ್ನು ನಿಖಿಲ್ ಕುಮಾರಸ್ವಾಮಿ ಅವರು ಭೇಟಿಯಾಗಿದ್ದಾರೆ.

ಹೌದು, ರಾಜ್ಯ ರಾಜಕೀಯ ಬೆಳವಣಿಗೆಯೊಂದರಂತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೆಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿದ್ದಾರೆ.

ಭೇಟಿಯ ಬಗ್ಗೆ ನಿಖಿಲ್ ಕುಮಾರಸ್ವಾಮಿಯವರು  ತನ್ನ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ ಎಂದು ನಿಖಿಲ್ ಹೇಳಿಕೊಂಡಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್- ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

Related