ಯಾವುದೇ ಕರೆ ಬಂದಿಲ್ಲ: ಜಗದೀಶ್ ಶೆಟ್ಟರ್

ಯಾವುದೇ ಕರೆ ಬಂದಿಲ್ಲ: ಜಗದೀಶ್ ಶೆಟ್ಟರ್

ಉಡುಪಿ: ರಾಜ್ಯ ರಾಜಕಾರಣದಲ್ಲಿ ಇತ್ತೀಚಿಗೆ ಆಪರೇಷನ್ ಹಸ್ತದ ಬಗ್ಗೆ ಹೆಚ್ಚು ಗ್ರಾಸವಾಗಿ ಚರ್ಚೆಯಾಗುತ್ತಿರುವುದರಿಂದ ಬಿಜೆಪಿ ನಾಯಕರು ಮತ್ತು ಜೆಡಿಎಸ್ ನಾಯಕರು ಬಿಜೆಪಿಯತ್ತ ಒಲವು ತೊರುತ್ತಿದ್ದಾರೆ ಎಂದು ತಿಳಿದು ತಿಳಿದು ಬರುತ್ತಿದೆ

ಇನ್ನು ಶುಕ್ರವಾರ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್​ ಎಂಎಲ್​ಸಿ ಜಗದೀಶ್ ಶೆಟ್ಟರ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರೆ ಮಾಡಿ ಮಾತನಾಡಿದ್ದಾರೆ ಎಂದು ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನೆಲೆ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಜಗದೀಶ್ ಶೆಟ್ಟರ್​​​, ನನಗೆ ಬಿಜೆಪಿ ಹೈಕಮಾಂಡ್​​ನಿಂದ ಯಾವುದೇ ಕರೆ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ದೆಹಲಿಯ ಹಿರಿಯ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಕರೆ ಮಾಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ಕರೆ ಬಾರದೆ ಈ ರೀತಿ ಚರ್ಚೆಗಳೆಲ್ಲ ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಘಟಕ ಲೀಡರ್ ಲೆಸ್ ಪಾರ್ಟಿ

ಕರ್ನಾಟಕ ರಾಜ್ಯ ಬಿಜೆಪಿ ಘಟಕ ಲೀಡರ್ ಲೆಸ್ ಪಾರ್ಟಿಯಾಗಿದೆ. ರಾಜ್ಯ ಬಿಜೆಪಿ ಘಟಕಕ್ಕೂ ಹೊಸ ಅಧ್ಯಕ್ಷರನ್ನು ನೇಮಿಸಲು ಆಗಿಲ್ಲ. ಕಾಂಗ್ರೆಸ್ ನಾಯಕರನ್ನು ಬಿಜೆಪಿಯವರು ಭೇಟಿಯಾಗುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಇನ್ನೂ ದಯನೀಯ ಪರಿಸ್ಥಿತಿಗೆ ಹೋಗುತ್ತೆ. ಬಿಜೆಪಿಯಲ್ಲಿ ಸಾಕಷ್ಟು ಜನ ನೊಂದಿದ್ದಾರೆ, ಸಂಕಟಪಡುತ್ತಿದ್ದಾರೆ. ಬಿಜೆಪಿಯಿಂದ ಹೊರಗೆ ಬರಲು ಬಹಳಷ್ಟು ಜನ ತಯಾರಿದ್ದಾರೆ ಎಂದು ಹೇಳಿದ್ದಾರೆ.

Related