ಹಾಲಿನ ದರ ಹೆಚ್ಚಳವಾಗಿಲ್ಲ: ಸಿಎಂ

ಹಾಲಿನ ದರ ಹೆಚ್ಚಳವಾಗಿಲ್ಲ: ಸಿಎಂ

ಬೆಂಗಳೂರು: ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ನಗರದಲ್ಲಿಂದು KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್ ಮಾಹೆಯಲ್ಲಿ ದಿನವೊಂದಕ್ಕೆ 90 ಲಕ್ಷ ಲೀ. ಇತ್ತು ಆದರಿಗ ಇದು ಒಂದು ಕೋಟಿ ಹೆಚ್ಚಳವಾಗಿರುವುದರಿಂದ ಇದು ಖುಷಿ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿಎಂ ಪತ್ನಿಗೆ ಮೂಡಾ ನಿವೇಶನ ಹಂಚಿಕೆ: ಸಿಎಂ ಸ್ಪಷ್ಟನೆ

ಹಾಲಿನ ಸೊಸೈಟಿಗಳು ರೈತರ ಸಂಘಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೈರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅಲ್ಲಿಯವರೆಗೂ ಡೈರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದರು.

ರೈತರಿಗೆ ನೆರವು

ರಾಜ್ಯದಲ್ಲಿ ಸುಮಾರು 16000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೈರಿಗಳಿವೆ. ಒಂದು ಕೋಟಿ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲಿ 50 ಮೀ.ಲೀ ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ. ರೈತರಿಗೆ ಸಹಾಯ ಮಾಡಲು  ನಂದಿನಿ ಹಾಲಿನ  ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಾಗಿರುವ ಪ್ರಮಾಣಕ್ಕೆ 2.00 ರೂಪಾಯಿ ಹೆಚ್ಚಿಸಲಾಗಿದೆ ಎಂದರು.

ಹಾಲಿನ ದರ ಹೆಚ್ಚಳವಾಗಿಲ್ಲ

ಒಂದು ವೇಳೆ ಹಾಲಿನ ಬೆಲೆ ಹೆಚ್ಚಾದರೂ ಕೊಳ್ಳುವವರಿಗೆ ಅದು ಭಾರವಾಗುತ್ತದೆ. ರೈತರಿಗೆ ಭಾರವಾಗುವುದಿಲ್ಲ, ಸಹಾಯವಾಗುತ್ತದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ ಎಂದು ಪುನರುಚ್ಚರಿಸಿದರು

 

Related