ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ: ಸಿಎಂ

ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ: ಸಿಎಂ

ಹಾವೇರಿ: ನಮ್ಮ ಸರ್ಕಾರದಲ್ಲಿ ಯಾರೇ ಆಗಲಿ ಕಾನೂನನ್ನು ಕೈಗೆತ್ತಿಕೊಳ್ಳಲು ನಾವು ಅವಕಾಶ ನೀಡುವುದಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ

ಹಾವೇರಿ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಾಮೂಹಿಕ ಅತ್ಯಾಚಾರ  ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು. ಉಳಿದಂತೆ ನೈತಿಕ ಪೊಲೀಸ್ ಗಿರಿ ಬಗ್ಗೆ ಮಾತನಾಡುತ್ತಾರೆ. ಅತ್ಯಾಚಾರ ಪ್ರಕರಣದ  ಬಗ್ಗೆ ಮಾತನಾಡಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಮಾತನಾಡಿದರೆ ಮಾತ್ರ ಕ್ರಮ ಇಲ್ಲದಿದ್ದರೆ ಇಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಮಾತನಾಡದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲವೇ ಎಂದರು.

ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನ

ಪ್ರಕರಣವನ್ನು ಎಸ್.ಐ.ಟಿಗೆ ವಹಿಸಲು ಬಿಜೆಪಿ ಆಗ್ರಹ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎಸ್.ಐ.ಟಿ ನಲ್ಲಿರುವವವರೂ ಪೊಲೀಸರೇ ಎಂದರು. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದರು. ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ   ಪ್ರಕರಣ ಮುಚ್ಚಿಹಾಕವ ಪ್ರಶ್ನೆಯೇ ಇಲ್ಲ ಎಂದರು. ತಪ್ಪು ಮಾಡಿದವರ ಮೇಲೆ ಕ್ರಮ ವಹಿಸಲಾಗುವುದು. ಅರ್ಜಿಯನ್ನು ಪರಿಶೀಲನೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

 

Related