ಕುಕ್ಕೆ ಸುಬ್ರಹ್ಮಣ್ಯಕ್ಕೆ ನಿಷೇಧ

ಕುಕ್ಕೆ ಸುಬ್ರಹ್ಮಣ್ಯಕ್ಕೆ ನಿಷೇಧ

ಮಂಗಳೂರು: ಸುಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ ಹಿನ್ನೆಲೆ ಡಿಸೆಂಬರ್ 17ರಿಂದ ನಾಲ್ಕು ದಿನ ಭಕ್ತಾದಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

ಕೊರೊನಾ ಎರಡನೇ ಅಲೆ ಸಂಭವವಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದಲ್ಲಿ ರಥೋತ್ಸವ ಸೇವೆಗಳಿಗೆ ಮುಂಗಡವಾಗಿ ನೋಂದಾಯಿಸಿಕೊಂಡಿರುವ ಭಕ್ತರನ್ನು ಹೊರತುಪಡಿಸಿ, ಮಹೋತ್ಸವ ಚೌತಿ, ಪಂಚಮಿ ಹಾಗೂ ಷಷ್ಠಿ ರಥೋತ್ಸವಗಳನ್ನು ಒಳಗೊಂಡಂತೆ ಶ್ರೀ ದೇವಳಕ್ಕೆ ಡಿ.17ರಿಂದ ಡಿ.20ರವರೆಗೆ ಎಲ್ಲಾ ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾಧಿಗಳಿಗೆ ನಿಬರ್ಂಧ ಹೇರಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

Related