ಹೆಸರು ಬದಲಾವಣೆ ಮಾಡೋದ್ರಿಂದ ಯಾವುದೇ ತೊಂದರೆ ಇಲ್ಲ: ರಾಮಲಿಂಗಾ ರೆಡ್ಡಿ

ಹೆಸರು ಬದಲಾವಣೆ ಮಾಡೋದ್ರಿಂದ ಯಾವುದೇ ತೊಂದರೆ ಇಲ್ಲ: ರಾಮಲಿಂಗಾ ರೆಡ್ಡಿ

ರಾಮನಗರ: ರಾಜ್ಯ ರಾಜಕೀಯದಲ್ಲಿ ಇತ್ತೀಚಿಗೆ ಬಾರಿ ಸದ್ದು ಮಾಡುತ್ತಿರುವ ವಿಷಯವೆಂದರೆ ಅದು ರಾಮನಗರ ಜಿಲ್ಲೆಯನ್ನು ಬೆಂಗಳೂರು ನಗರಕ್ಕೆ ಸೇರಿಸುವ ವಿಷಯ.

ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಪ್ರತಿಕ್ರಿಯೆ ನೀಡಿದ್ದು, ಹೆಸರು ಬದಲಾವಣೆ ಮಾಡುವುದರಿಂದ ಯಾವುದೇ ತೊಂದರೆ ಇಲ್ಲ. ಹೆಸರು ಬದಲಾವಣೆ ಮಾಡಿದರೆ ನಷ್ಟ ಆಗಲ್ಲ. ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯ ಸಿಗಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ಟೌನಿನ ಡಾ. ಶ್ರೀ ಶಿವಕುಮಾರ ಸ್ವಾಮಿಗಳ ಸಭಾಂಗಣದಲ್ಲಿ ಅವರು ಇಂದು ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿದರು ಮಾತನಾಡಿದರು.

ಮರುನಾಮಕರಣದ ವಿಚಾರ ನನಗೆ ಗೊತ್ತಿಲ್ಲ. ನನಗೆ ವೈಯಕ್ತಿಕವಾಗಿ ಡಿಕೆ ಶಿವಕುಮಾರ್ ಸಿಕ್ಕಿಲ್ಲ, ಚರ್ಚೆ ಮಾಡಿಲ್ಲ. ಆದರೆ ಹೆಸರು ಬದಲಾವಣೆ ಮಾಡೋದ್ರಿಂದ ಯಾವುದೇ ತೊಂದರೆ ಇಲ್ಲ. ಹೆಸರು ಬದಲಾವಣೆ ಮಾಡಿದ್ರೆ ಯಾವುದೇ ನಷ್ಟ ಆಗಲ್ಲ. ಜೊತೆಗೆ ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯಗಳು ಸಿಗಬೇಕು. ಆ ಉದ್ದೇಶದಿಂದ ಬದಲಾವಣೆ ಆದರೆ ತೊಂದರೆ ಇಲ್ಲ ಎಂದರು.

Related