5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಿಎಂ

5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಿಎಂ

ಬೆಂಗಳೂರು: ಬಡವರಿಗೋಸ್ಕರ ನಾವು 5 ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ಈ ಯೋಜನೆಗಳನ್ನು ನಾವು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುತ್ತೇವೆ ಹೊರತಾಗಿ ಈ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲವೆಂದು ಉತ್ತರಿಸಿದ್ದಾರೆ. ನಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತೇವೆಯೇ ಹೊರತು ನಿಲ್ಲಿಸುವ ಪ್ರಶ್ನೆಯಿಲ್ಲ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು. ನಿಮಗೆ ಅಕ್ಷತೆ ಬೇಕಾ ಅಥವಾ ಗ್ಯಾರಂಟಿಗಳು ಬೇಕಾ ಎಂಬ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಟೀಕೆಗೆ ಪ್ರತಿಕ್ರಿಯೆಯಾಗಿ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತಾ ಮುಂದುವರಿಸಲಾಗುವುದು ಎಂದರು.

Related